ಸೀರೆ ಹಂಚಿದ ಪ್ರಕರಣ; ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಿರುದ್ಧ ಭಾಲ್ಕಿಯಲ್ಲಿ ಪ್ರಕರಣ ದಾಖಲು

Must Read

ಬೀದರ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ಕಾರ್ಯಕರ್ತರು ಮತದಾರರಿಗೆ ಸೀರೆ ಹಂಚುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಲ್ಕಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಖಂಡ್ರೆಯವರ ಕಾರ್ಯಕರ್ತರಿಂದ ಸೀರೆ ಹಂಚುತ್ತಿದ್ದ ವೇಳೆ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿ ಡಿ ಕೆ ಸಿದ್ದರಾಮ ಹಾಗೂ ಬಿಜೆಪಿ ಕಾರ್ಯಕರ್ತರು ದಾಳಿ ಮಾಡಿ ಸೀರೆ ತೆಗೆದುಕೊಂಡು ಹೋಗುತ್ತಿದ್ದ ವಾಹನ ತಡೆದು  ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ಸ್ಥಳಕ್ಕೆ ಭಾಲ್ಕಿ ಚುನಾವಣೆ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿ ಹಂಚಲು ತಂದಿದ್ದ ವಾಹನ ಹಾಗು 370 ಸೀರೆ ಜಪ್ತಿ ಮಾಡಿದ್ದರು ಈ ಘಟನೆ ಸಂಬಂಧ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ ಮತ್ತು ರಾಜಕುಮಾರ್ ಕಾಶಿನಾಥ್ ದೊಡ್ಮನಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group