ವಿಕಲಚೇತನರು ಮತದಾನದಿಂದ ವಂಚಿತರಾಗಬಾರದು; ತಾಪಂ ಇಓ ರಾಠೋಡ

0
740

ಸಿಂದಗಿ: ವಿಧಾನಸಭೆ ಚುನಾವಣೆಯಲ್ಲಿ ಯಾವ ವಿಕಲಚೇತನ ವ್ಯಕ್ತಿಗಳೂ ಮತದಾನದಿಂದ ವಂಚಿತರಾಗಬಾರದು ಎಂದು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ  ಸ್ವೀಪ್ ಸಮಿತಿ ಅಧ್ಯಕ್ಷ ಬಾಬು ರಾಠೋಡ ಹೇಳಿದರು.

ಪಟ್ಟಣದ ತಾಲೂಕ ಪಂಚಾಯತ ಸಭಾ ಭವನದಲ್ಲಿ  ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ  ನಗರ ಪುನರ್ವಸತಿ ಕಾರ್ಯಕರ್ತರ ವಿಕಲಚೇತನ ಮತದಾನ ಜಾಗೃತಿ ಸಭೆಯ ಅದ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಇದೇ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ  ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳಾದ ರಾಜಶೇಖರ ದೈವಾಡಿ ಮಾತನಾಡಿ, ಕ್ಷೇತ್ರದ ಪ್ರತಿಯೊಂದು ಮತಗಟ್ಟೆಯಲ್ಲಿ ವಿಕಲಚೇತನರಿಗೆ ಮತದಾನ ಮಾಡಲು ರಾಂಪ್ ವಿಲ್ಹ್ ಚೇರ್, ಕುಡಿಯುವ ನೀರು ಸೇರಿ ಮೂಲಸೌಲಭ್ಯಗಳ ವ್ಯವಸ್ಥೆ ಕಲ್ಪಿಸಬೇಕು.

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ  ನಗರ ಪುನರ್ವಸತಿ ಕಾರ್ಯಕರ್ತರು ಮತದಾನ ಕುರಿತು ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಮೂಲಸೌಕರ್ಯಗಳನ್ನು ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.     

ವಿಕಲಚೇತನರು ಹಾಗೂ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಮತದಾನದಿಂದ ವಂಚಿತರಾಗದಂತೆ ಕ್ಷೇತ್ರವ್ಯಾಪ್ತಿಯಲ್ಲಿ ಹೆಚ್ಚು ಪ್ರಚಾರ ಕಾರ್ಯಕ್ರಮ ಹಮ್ಮಿಕೊಂಡು ಜಾಗೃತಿ ಮೂಡಿಸಿ ಮತದಾನ ಪ್ರಮಾಣ ಹೆಚ್ಚಿಸಲು ಅಗತ್ಯಕ್ರಮ ಕೈಗೋಳ್ಳಬೇಕೆಂದು ಸೂಚಿಸಿದರು.

ಮತದಾನ ಕುರಿತು ಕೂಡಿದ ಸಭೆಯಲ್ಲಿ ಮತದಾನ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ಈ ಸಂಧರ್ಭದಲ್ಲಿ ಡಿಡಿಡಬ್ಲು ಕಚೇರಿಯ ಸಿಬ್ಬಂದಿ ಸುನೀಲ ಯರಕಿಹಾಳ, ತಾಲೂಕಾ ಎಮ್,ಆರ್.ಡಬ್ಲ್ಯು ಎಂ.ಬಿ.ಸಾತಿಹಾಳ ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ನಗರ ಪುನರ್ವಸತಿ ಕಾರ್ಯಕರ್ತರು ಉಪಸ್ಥಿತರಿದ್ದರು.