ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ವಿಶ್ವ ಪುಸ್ತಕ ದಿನಾಚರಣೆ ಮತ್ತು ಬಸವ ಜಯಂತಿ ಆಚರಣೆ

Must Read

ಬೆಂಗಳೂರು: ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ವತಿಯಿಂದ ವಿಶ್ವ ಪುಸ್ತಕ ಹಾಗೂ ಕೃತಿಸಾಮ್ಯ ದಿನಾಚರಣೆ ಮತ್ತು ಬಸವ ಜಯಂತಿ ಕಾರ್ಯಕ್ರಮ ವನ್ನು ದಿ. 23 ರಂದು ಹಮ್ಮಿಕೊಳ್ಳಲಾಗಿತ್ತು.

ಗ್ರಂಥಾಲಯದಲ್ಲಿ ಪುಸ್ತಕ ಪ್ರದರ್ಶನ ಹಾಗೂ ವಿಶ್ವ ಪುಸ್ತಕ ದಿನಾಚಣೆ ಅಂಗವಾಗಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು

ಡಾ. ಸತೀಶ್ ಕುಮಾರ್ ಎಸ್ ಹೊಸಮನಿ ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ ಇವರು ಬಹುಮಾನ ವಿತರಣೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು ಹಾಗೂ ವಿಲಿಯಮ್ ಶೆಕ್ಸ್ ಪಿಯರ್ ಹಾಗೂ ಬಸವಜಯಂತಿ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ ಸರೋಜಮ್ಮ ಎಂ. ಉಪ ನಿರ್ದೇಶಕರು ರಾಜ್ಯ ಕೇಂದ್ರ ಗ್ರಂಥಾಲಯ ಹಾಗೂ ಶ್ರೀಮತಿ ಅನಿತಾ ಮುಖ್ಯ ಗ್ರಂಥಾಲಯ ಅಧಿಕಾರಿ, ಅಣ್ಣಾ ರಾವ್, ಶ್ರೀಮತಿ ಶೈಲಜಾ, ಶ್ರೀಮತಿ ಮಮತಾ ಹಾಗೂ ಸಿಬ್ಬಂದಿ ವರ್ಗದವರು , ಸಾರ್ವಜನಿಕ ಓದುಗರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group