Homeಸುದ್ದಿಗಳುಮೋದಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನೇತಾರರಿಂದ ಅಡ್ಡಿ - ಭಗವಂತ ಖೂಬಾ ಆರೋಪ

ಮೋದಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನೇತಾರರಿಂದ ಅಡ್ಡಿ – ಭಗವಂತ ಖೂಬಾ ಆರೋಪ

ಬೀದರ: ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರ ದಿನಾಂಕ 29, ರ ಬೀದರ್ ಜಿಲ್ಲೆ ಹುಮನಾಬಾದ ಸಮಾವೇಶಕ್ಕೆ ಕಾಂಗ್ರೆಸಿನ ನೇತಾರರು ಪರೋಕ್ಷವಾಗಿ ಅಡ್ಡಿಪಡಿಸುವಂತಹ ಕೆಲಸಕ್ಕೆ ಕೈಹಾಕಿದ್ದಾರೆ ಎಂದು ಸಂಸದ ಭಗವಂತ ಖೂಬಾ ಆರೋಪಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ನಡುವಲ್ಲೇ ಬಿಜೆಪಿ ಅಬ್ಬರ ಪ್ರಚಾರವನ್ನು ನಡೆಸುತ್ತಿದೆ. ಪ್ರಚಾರಕ್ಕಾಗಿ ಏಪ್ರಿಲ್ 29 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆಂದು ತಿಳಿದುಬಂದಿದೆ.

ಈ ಸಂಬಂಧ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಮಾಹಿತಿ ನೀಡಿದ್ದಾರೆ. ಚುನಾವಣಾ ಪ್ರಚಾರ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಏಪ್ರಿಲ್ 29 ರಂದು ಬೀದರ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹುಮನಾಬಾದ ತಾಲೂಕಿನ ಚಂದನಕೇರಾ ಕ್ರಾಸ್ನಲ್ಲಿ ಪ್ರಧಾನಿ ಮೋದಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಬೆಳಗ್ಗೆ 10 ಗಂಟೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಔರಾದ್, ಭಾಲ್ಕಿ, ಬಸವಕಲ್ಯಾಣ, ಬೀದರ್, ಹುಮನಾಬಾದ್, ಬೀದರ್ ದಕ್ಷಿಣ, ಆಳಂದ, ಚಿಂಚೋಳಿ ಹೀಗೆ ಎಂಟು ವಿಧಾನಸಭಾ ಕ್ಷೇತ್ರಗಳ ಜನರು ಭಾಗವಹಿಸುತ್ತಾರೆಂದು ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರು ಬಂದರೆ ಕಾಂಗ್ರೆಸ್ ಹೀನಾಯವಾಗಿ ಸೋಲುತ್ತದೆ ಎಂಬ ವಿಷಯ ಮನಗಂಡು ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಲು ಷಡ್ಯಂತ್ರ ನಡೆಸುತ್ತಿದ್ದಾರೆ. ಏನೇ ಕುತಂತ್ರ ಮಾಡಿದರೂ ಕೂಡ ಈ ಬಾರಿ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಸಿದ್ದು ಪಾಟೀಲ ಗೆಲ್ಲುವುದು ಖಚಿತ ಎಂಬುದುನ್ನು ಒತ್ತಿ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಸಿದ್ಧಲಿಂಗಪ್ಪ ಪಾಟೀಲ, ಮಾಜಿ ಶಾಸಕ ಸುಭಾಶ ಕಲ್ಲೂರ್,ಮಂಡಲ ಅಧ್ಯಕ್ಷ ಪ್ರಭಾಕರ್, ಅಂಬೇಡ್ಕರ್ ನಿಗಮ ಮಂಡಳಿ ಬಸವರಾಜ್ ಆರ್ಯ ಉಪಸ್ಥಿತರಿದ್ದರು.

RELATED ARTICLES

Most Popular

error: Content is protected !!
Join WhatsApp Group