ಲಂಡನ್‌ನಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ
ಬೆಂಗಳೂರು: ಎಲ್ಲರನ್ನೂ ಒಳಗೊಳ್ಳುವ ಸಮಾಜದ ಪರಿಕಲ್ಪನೆಯನ್ನು ಸಾಕಾರಗೊಳಿಸಿದ ಬಸವಣ್ಣನವರ ಬೋಧನೆಗಳು ಇಂದಿಗೂ ಪ್ರಸ್ತುತ ಎಂದು ಅದಮ್ಯ ಚೇತನ ಮುಖ್ಯಸ್ಥೆ ಡಾ. ತೇಜಸ್ವಿನಿ ಅನಂತಕುಮಾರ್ ಹೇಳಿದರು.
ಇಂದು ಲಂಡನ್ ನಗರದಲ್ಲಿರುವ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.
ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ನಿನ ಐತಿಹಾಸಿಕ ಪ್ರಕಲ್ಪವಾದ ಲಂಡನ್‌ನಲ್ಲಿ ಶ್ರೀ ಬಸವೇಶ್ವರರ ಪ್ರತಿಮೆಯ ಸ್ಥಳಕ್ಕೆ ಆಗಮಿಸಿ ಗೌರವ ಸಲ್ಲಿಸುವ ಅವಕಾಶ ದೊರೆತಿರುವುದು ಬಹಳ ಸಂತಸದ ವಿಷಯ. ದಿವಂಗತ ಅನಂತಕುಮಾರ್ ಅವರು ಪ್ರತಿಮೆಯ ಸ್ಥಾಪನೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು. ಬಸವೇಶ್ವರರು ತಮ್ಮ ಬೋಧನೆಗಳ ಮೂಲಕ ಇಡೀ ಜಗತ್ತಿಗೆ ಎಲ್ಲರನ್ನೂ ಒಳಗೊಳ್ಳುವ ಪರಿಕಲ್ಪನೆಯನ್ನು ನೀಡಿದವರು. ಅವರ ಬೋಧನೆಗಳೂ ಇಂದಿಗೂ ಪ್ರಸ್ತುತ ಎಂದು ಹೇಳಿದರು.
ಬ್ರಿಟೀಷ್ ಭಾರತೀಯ ಮತ್ತು ಕನ್ನಡ ಸಮುದಾಯದ ಸದಸ್ಯರನ್ನ ಒಟ್ಟುಗೂಡಿಸಿದ ಈ ಕಾರ್ಯಕ್ರಮದಲ್ಲಿ ದಿ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್‌ನ ಅಧ್ಯಕ್ಷ ಡಾ. ನೀರಜ್ ಪಾಟೀಲ್ ಮತ್ತು ವಿಜೇತಾ ಅನಂತಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ: ತೀರ್ಥಹಳ್ಳಿ ಅನಂತ ಕಲ್ಲಾಪುರ