ಮೂಡಲಗಿ: ಜಿಲ್ಲಾ ಪಂಚಾಯತ್ ಬೆಳಗಾವಿ,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕೋಡಿ, ತಾಲೂಕು ಪಂಚಾಯತ್ ಮೂಡಲಗಿ, ಗ್ರಾಮ ಪಂಚಾಯತ್ ಯಾದವಾಡ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ RDS ಮುರಗೋಡ ಸಹಯೋಗದೊಂದಿಗೆ, ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ,
ಮೂಡಲಗಿ ತಾಲ್ಲೂಕಿನ ಯಾದವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗಿರಿಸಾಗರ ಓಣಿಯ ನಾಗಪ್ಪ ಕಟ್ಟೆ ಬಳಿ ಇರುವ ಕಲ್ಯಾಣಿಯನ್ನು (ಭಾವಿ)JJM ಯೋಜನೆಯ ಕಾರ್ಯಕ್ರಮವಾದ ಕಿರು ಜಲಮೂಲಗಳ ಪುನಶ್ಚೇತನ ಕಾರ್ಯಕ್ರಮದ ಮೂಲಕ ಅಭಿವೃದ್ಧಿ ಕಾರ್ಯ ಮಾಡಲು ಗಿಡಗಳನ್ನು ನೆಡುವ ಮೂಲಕ ಚಾಲನೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ದೀಪಕ್ ಕಾಂಬ್ಳೆ ಜಿಲ್ಲಾ ಯೋಜನಾ ವ್ಯವಸ್ಥಾಪಕರು(DPM), ಸುರೇಶ. S. ಸಾವಳಗಿ ಗ್ರಾಮ ಪಂಚಾಯತ್ ಅಧ್ಯಕರು,ಶ್ರೀಮತಿ ಆರತಿ. ಜಿ. ಪತ್ತಾರ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರುಗಳು, ಪಂಚಾಯಿತಿ ಕಾರ್ಯದರ್ಶಿಗಳು, ಕರವಸೂಲಿಗಾರರು ನೀರುಗಂಟಿಗಳು, ಸ್ವಚ್ಛತಾಗಾರರು, JJM ISA ಮತ್ತು ISRA ತಂಡದವರು, ಗ್ರಾಮಸ್ಥರು ಮತ್ತು ಅಂಗನವಾಡಿ / ಆಶಾ ಕಾರ್ಯಕತರು,ಸಂಘ,ಸಂಸ್ಥೆಗಳು ಗ್ರಾಮಸ್ಥರು ಭಾಗವಹಿಸಿದರು, ಶಿಥಿಲ ವ್ಯವಸ್ಥೆಯಲ್ಲಿದ್ದ ಕಲ್ಯಾಣಿಯ ಪುನಶ್ಚೇತನವನ್ನು ಶ್ರಮದಾನ ಮೂಲಕ ಜನರಿಗೆ ಅನುಕೂಲ ಮಾಡಿಕೊಡಲಾಯಿತು. ಹಾಗೂ ಪರಿಸರ ದಿನಾಚರಣೆ ಅಂಗವಾಗಿ ಸಸಿಗಳನ್ನು ನೆಡುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.