ಬೆಳಗಾವಿ: ಬೆಳ್ಳಿಚುಕ್ಕಿ ಸಾಂಸ್ಕೃತಿಕ ಅಕಾಡೆಮಿ, ಬೆಳಗಾವಿ ಮತ್ತು ಕನ್ನಡ ಸಾಹಿತ್ಯ ಪರಿಷತ್ ಬೆಳಗಾವಿ ಇವರುಗಳ ಸಂಯುಕ್ತಾಶ್ರಯದಲ್ಲಿ ಡಾ. ಎಸ್. ಬಿ. ಬಾಲಸುಬ್ರಮಣ್ಯಂ ಅವರ ಜನ್ಮ ದಿನದ ಪ್ರಯುಕ್ತ “ಗಂಧದ ಗುಡಿಯಲ್ಲಿ ಮಿಂದ ಕೋಗಿಲೆ” ಸಂಗೀತ ರಸ ಸಂಜೆ ಕಾರ್ಯಕ್ರಮವನ್ನು ನಗರದ ಕನ್ನಡ ಭವನದಲ್ಲಿ ರವಿವಾರ ದಿ. 11 ರಂದು ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ.
ಕೆ.ಎಲ್.ಇ ಸಂಸ್ಥೆ ಕಾರ್ಯಾಧ್ಯಕ್ಷ ಮಾಜಿ ರಾಜ್ಯ ಸಭಾ ಸದಸ್ಯ ಡಾ. ಪ್ರಭಾಕರ ಕೋರೆ ರಸ ಸಂಜೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಬೆಳಗಾವಿ ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಮಂಗಲಾ ಮೆಟಗುಡ್ಡ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳಗಾವಿ ಕಸಾಪ ಮಾಜಿ ಜಿಲ್ಲಾ ಅಧ್ಯಕ್ಷ, ಚಾರಿತ್ರಿಕ ಕಾದಂಬರಿಕಾರ ಯ. ರು. ಪಾಟೀಲ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.
ಸಂಗೀತ ರಸ ಸಂಜೆ ಕಾರ್ಯಕ್ರಮಕ್ಕೆ ಸರ್ವರಿಗೂ ಉಚಿತವಾಗಿ ಪ್ರವೇಶವಿದ್ದು ಎಲ್ಲಾ ಕನ್ನಡಾಬಿಮಾನಿಗಳು ಸಂಗೀತ ಪ್ರೇಮಿಗಳು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕನ್ನಡ ಸಾಹಿತ್ಯ ಪರಿಷತ್ ಬೆಳಗಾವಿ ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಮಂಗಲಾ ಮೆಟಗುಡ್ಡ, ಬೆಳ್ಳಿಚುಕ್ಕಿ ಬಳಗ, ಕನ್ನಡ ಭವನ ಉಸ್ತುವಾರಿ ಸಮಿತಿ ಬೆಳಗಾವಿ ಇವರುಗಳು ಜಂಟಿಯಾಗಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ವರದಿ:
ಆಕಾಶ್ ಅರವಿಂದ ಥಬಾಜ
ಜಿಲ್ಲಾ ಸಹ ಮಾಧ್ಯಮ ಪ್ರತಿನಿಧಿ
ಕನ್ನಡ ಸಾಹಿತ್ಯ ಪರಿಷತ್,
ಬೆಳಗಾವಿ ಜಿಲ್ಲೆ, ಬೆಳಗಾವಿ
9448634208
9035419700