ಶುದ್ಧ ಕುಡಿಯುವ ನೀರು ಘಟಕಗಳ ನಿರ್ವಹಣಾ ಕಾರ್ಯಾಗಾರ

Must Read

ಬೆಳಗಾವಿ – ಜಿಲ್ಲಾ ಪಂಚಾಯತ್ ಬೆಳಗಾವಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕೋಡಿ ವಿಭಾಗದ ಸಂಯುಕ್ತ ಆಶ್ರಯದಲ್ಲಿ  ಕಾರ್ಯ ನಿರ್ವಹಿಸುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ದಿ. ೧೩ ರಂದು ಹಮ್ಮಿಕೊಳ್ಳಲಾಯಿತು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಎ. ಎಸ್. ಬಣಗಾರ ಕಾರ್ಯನಿರ್ವಾಹಕ ಅಭಿಯಂತರು ಚಿಕ್ಕೋಡಿ  ವಹಿಸಿಕೊಂಡು ಕಾರ್ಯಾಗಾರವನ್ನು ಸಸಿಗೆ ನೀರು ಹಾಕುವುದರ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಚಿಕ್ಕೋಡಿ ವಿಭಾಗದ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಬಗ್ಗೆ ತಿಳಿದುಕೊಂಡು ಅದನ್ನು ತಮ್ಮ ಗ್ರಾಮ ಪಂಚಾಯತಿಯಲ್ಲಿ ಒಳ್ಳೆಯ ರೀತಿ ಕಾರ್ಯಾಚರಣೆ ಮಾಡಿಕೊಂಡು ಹೋಗುವಲ್ಲಿ ನಿಮ್ಮ ಪಾತ್ರ ತುಂಬಾ ಮುಖ್ಯವಾಗಿರುತ್ತದೆ ಎಂದು ಅಧ್ಯಕ್ಷತೆಯ ಪ್ರಾಸ್ತಾವಿಕ ಮಾತನಾಡಿದರು.

ಈ ತರಬೇತಿ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ವಿಲ್ಸನ್ ಧನರಾಜ ಬೆಂಗಳೂರು ಇವರು ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯಚರಣೆ ನಿರ್ವಹಣೆ ಕುರಿತು ಸಂಪೂರ್ಣವಾಗಿ ಪ್ರಾಯೋಗಿಕವಾಗಿ ಮಾಹಿತಿಯನ್ನು ತಿಳಿಸಿದರು. ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ದೀಪಕ.ಕೆ. ಅವರು ಮಾತನಾಡಿ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ನೀರುಘಂಟಿಗಳು ಅವರು ಇದರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಹೇಳಿದರು.

ತರಬೇತಿ ಕಾರ್ಯಕ್ರಮಕ್ಕೆ ಎಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಚಿಕ್ಕೋಡಿ ತಾಲೂಕಾ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪ್ರತಿ ಗ್ರಾಮ ಪಂಚಾಯಿತಿಯಿಂದ ಒಬ್ಬರು ನೀರು ಘಂಟಿ ಗಳು ಮತ್ತು ಜಲ ಜೀವನ ಮಿಷನ್ ಯೋಜನೆಯ ಅನುಷ್ಠಾನ ಬೆಂಬಲ ಸಂಸ್ಥೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಂಡದ ನಾಯಕರು ಮತ್ತು ಸಮುದಾಯ ಸಂಘಟಕರು   ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

Latest News

ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ

ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ...

More Articles Like This

error: Content is protected !!
Join WhatsApp Group