Belagavi: ಬೆಳಗಾವಿ ವಿಮಾನ ನಿಲ್ದಾಣ ನವೀಕರಣಕ್ಕೆ ಅನುಮತಿ

Must Read

ಮೂಡಲಗಿ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಬೆಳಗಾವಿ ವಿಮಾನ ನಿಲ್ದಾಣದ ನವೀಕರಣಕ್ಕಾಗಿ ರೂ.230 ಕೋಟಿ ರೂಪಾಯಿಗಳ ಯೋಜನಾ ವರದಿ ತಯಾರಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಟೆಂಡರ್ ಪ್ರಕ್ರಿಯೆ ಜಾರಿಗೊಳಿಸಲಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ.

ರವಿವಾರ ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಪ್ರಯಾಣಿಕರ ಟರ್ಮಿನಲ್ ಕಟ್ಟಡದ ವಿಸ್ತರಣೆ,  ಮೂರು ಏರೋಬ್ರಿಡ್ಜ್‌ಗಳು ಹಾಗೂ  ಏರೋ ಕ್ರಾಫ್ಟ್ ನಿಲ್ದಾಣ, ವಾಹನ ಪಾರ್ಕಿಂಗ್ ಹೀಗೆ ಎಲ್ಲಾ ಆಧುನಿಕ ಸೌಲಭ್ಯಗಳನ್ನು ಒಳಗೊಂಡಿದೆ. ಕೇವಲ 36 ತಿಂಗಳಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸಲು ನಿರ್ಬಂಧ ವಿಧಿಸಲಾಗಿದೆ ಎಂದರು 

ಬೆಳಗಾವಿ ವಿಮಾನ ನಿಲ್ದಾಣ ವಿಸ್ತರಣೆ ನಿರ್ಣಯ ಕೈಗೊಂಡ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಅನಂತ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.

Latest News

ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ

ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...

More Articles Like This

error: Content is protected !!
Join WhatsApp Group