ಒಡೆಯರ್ ಪುತ್ಥಳಿ ಅನಾವರಣ ಕಾರ್ಯಕ್ರಮ

Must Read

ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ  ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಶುಕ್ರವಾರ ದಿನಾಂಕ 21-7-2023 ಸಂಜೆ 5:00 ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ  ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಪ್ರತಿಮೆ ಅನಾವರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮೈಸೂರಿನ ಅರಸರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಇವರುಗಳು ಮಾಡಲಿದ್ದಾರೆ. 

ಗೌರವ ಅತಿಥಿಗಳಾಗಿ ಭಾರತ ಸರ್ವೋಚ್ಚ ನ್ಯಾಯಾಲಯದ, ವಿಶ್ರಾಂತ ನ್ಯಾಯಮೂರ್ತಿಗಳಾದ ಶಿವರಾಜ್ ವಿ ಪಾಟೀಲ್ ಅವರು ಆಗಮಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಚಿವರಾದ ಶಿವರಾಜ ತಂಗಡಗು,  ಬಿ ಜಡ್ ಜಮೀರ್ ಅಹ್ಮದ್ ಖಾನ್ ಅವರುಗಳು  ಭಾಗವಹಿಸಲಿದ್ದಾರೆ.

ಹಾಗೂ ಗೌರವ ಉಪಸ್ಥಿತಿಯಲ್ಲಿ ಹಿರಿಯ ಸಾಹಿತಿಗಳಾದ ಡಾ ದೊಡ್ಡ ರಂಗೇಗೌಡರು ಮತ್ತು ಮಾಜಿ ಸಚಿವರಾದ ಎಚ್ಎಮ್ ರೇವಣ್ಣ ಅವರು ಭಾಗವಹಿಸಲಿದ್ದಾರೆ.

ಎಲ್ಲರೂ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಡಾ. ಜೋಶಿ ಆಹ್ವಾನಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group