ಬೀದರ್ – ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಮೂಡುಬಿ ಗ್ರಾಮದಲ್ಲಿ ಇರುವ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ
ಶೈಕ್ಷಣಿಕ ವರ್ಷದ 6ನೇ ತರಗತಿಯಲ್ಲಿ ಖಾಲಿ ಉಳಿದ ಸೀಟು ಪ್ರವೇಶಕ್ಕಾಗಿ 40,000 ಸಾವಿರ ಬೇಡಿಕೆ ಇಟ್ಟಿದ್ದ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಾಗಿದೆ.
ಒಟ್ಟು ಹತ್ತು ಸೀಟು ಉಳಿದ ಹಿನ್ನೆಲೆಯಲ್ಲಿ ಪ್ರಾಂಶುಪಾಲರು ಒಂದು ಸೀಟಿಗೆ ರೂ 40 ಸಾವಿರ ಬೇಡಿಕೆ ಇಟ್ಟಿದ್ದರು. ವಿದ್ಯಾರ್ಥಿಗಳು ಪಾಲಕರ ಹತ್ತಿರ ಇಪ್ಪತ್ತು ಸಾವಿರ ಪಡೆಯುವ ಸಂದರ್ಭದಲ್ಲಿ ಪ್ರಾಂಶುಪಾಲರು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಡಬಿ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯ ಪ್ರಾಂಶುಪಾಲ ಶಂಕರ ಜೋತಗೊಂಡ ಲೋಕಾಯುಕ್ತ ಬಲೆಗೆ ಬಿದ್ದವರು.
ಲೋಕಾಯುಕ್ತ ಡಿ ವೈ ಎಸ್ ಪಿ ಓಲೆಕಾರ್ ನೇತೃತ್ವದಲ್ಲಿ ನಡೆದ ದಾಳಿ.
ಈ ಸಂದರ್ಭದಲ್ಲಿ ಲೋಕಾಯುಕ್ತ ಪಿಐ ಪ್ರದೀಪ್ ಕೊಳ್ಳಾ, ವಾಯಿದ್ ಕೋತ್ವಾಲ್ ಪಿಐ, ಬಾಬಾಸಾಬ್ ಪಾಟೀಲ್ ಪಿಐ, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ : ನಂದಕುಮಾರ ಕರಂಜೆ, ಬೀದರ