- Advertisement -
ಸಿಂದಗಿ: ಭಾರತೀಯ ಜನತಾ ವಿಜಯಪುರ ಜಿಲ್ಲಾ ಎಲ್ಲಾ ಮಂಡಲದ ಸಂಯುಕ್ತ ಮೋರ್ಚಾಗಳ ಸಮಾವೇಶವನ್ನು ಆ 07 ರಂದು ಬೆಳಿಗ್ಗೆ 11:00 ಗಂಟೆಗೆ ಸಿಂದಗಿ ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಪದಾಧಿಕಾರಿಗಳು, ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳು, ಕಾರ್ಯಕರ್ತರು, ವಿಜಯಪುರ ಜಿಲ್ಲೆಯ ಎಲ್ಲಾ ಮಂಡಲ ಪದಾಧಿಕಾರಿಗಳು ಹಾಗೂ ಪ್ರಮುಖರು ಸಭೆಗೆ ಆಗಮಿಸುವರು.
ಆದಕಾರಣ ಸಿಂದಗಿ ಮಂಡಲದ ಪದಾಧಿಕಾರಿಗಳು, ಎಲ್ಲಾ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು, ಜನಪ್ರತಿನಿಧಿಗಳು, ಪಕ್ಷದ ಕಾರ್ಯಕ್ರಮವನ್ನ ಮುಖಂಡರು, ಹಿತೈಷಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮಂಡಲ ಅಧ್ಯಕ್ಷ ಈರಣ್ಣ ರಾವುರ ವಿನಂತಿಸಿದ್ದಾರೆ.