Bidar: ಮಂಗನ ದಾಳಿ; ಮೂವರಿಗೆ ಗಾಯ

Must Read

ಬೀದರ: ಬೀದರ ಜಿಲ್ಲೆಯ ಹುಮನಾಬಾದ ತಾಲ್ಲೂಕಿನ ಘೋಡವಾಡಿಯಲ್ಲಿ ಮಂಗವೊಂದು ಜನರ ಮೇಲೆ ದಾಳಿ ನಡೆಸಿದ್ದರ ಪರಿಣಾಮ ಮೂವರು ಗಾಯಗೊಂಡಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಈ ಮಂಗವು ಜನರಿಗೆ ಕಾಟ ಕೊಡುತ್ತಿದೆ. ಎಲ್ಲೆಂದರಲ್ಲಿ ಜನರನ್ನು ಬೆನ್ನಟ್ಟಿ ಜನರ ಮೇಲೆ ದಾಳಿ  ನಡೆಸುತ್ತಿದೆ. ಗ್ರಾಮದಲ್ಲಿ ಮಂಗಕ್ಕೆ ಹೆದರಿ ಜನ ಮನೆಗಳಿಂದ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ. ಕಾರ್ಮಿಕರು ಮತ್ತು ರೈತರು ಹೊಲಗಳಿಗೆ ತೆರಳಲೂ ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಬಂಧಪಟ್ಟವರು ಬೇಗ ಮಂಗನನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದು, ಹುಚ್ಚು ಮಂಗ ದಾಳಿ ಮಾಡಿ ಜನರ ದೇಹದ ಮೇಲೆ ದಾಳಿ ಮಾಡುತ್ತಿದೆ.  ಆದಷ್ಟು ಬೇಗ ಸೆರೆ ಹಿಡಿಯುವ ಪ್ರಯತ್ನ ಮಾಡಲಾಗುವುದು ಎಂದು  ಅರಣ್ಯಾಧಿಕಾರಿ ಶಿವಕುಮಾರ ರಾಠೊಡ ಹೇಳಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಕವನ : ಹೃದಯ ವೀಣೆ

ಹೃದಯ ವೀಣೆಶುರುವಾಗಿದೆ ಆಸೆಗಳ ಆಂದೋಲನ ಅತಿಯಾಗಿ ಹೇಳಲಾಗದೆ ಉಳಿದಿವೆ ಅದೆಷ್ಟೋ ಮಾತುಗಳು ಮುದುರಿ ಹೋಗಿವೆ ಎದೆಯ ಗೂಡೊಳಗೆ ಬಂದೊಮ್ಮೆ ಮೀಟು ಹೃದಯ ವೀಣೆ ಕಾಯುತಿವೆ ನಿನ್ನ ಬರುವಿಗಾಗಿ ಭಾವಲತೆಗಳು ನೀ ಬಂದು ಸಂತೈಸು ಮಿಡಿಯುವ ಮನವ ಬಂದುಬಿಡೊಮ್ಮೆ ಅಂತರಂಗದ ಹೂ ಬನಕೆ ಮಧುವರಿಸಿ ಬರುವ ದುಂಬಿಯಂತೆ ಮಿಲನವಾಗಲಿ ಮಧುರ ಪ್ರೇಮಕಾವ್ಯ ಕಾಯುತಿದೆ ಮನವು ಬಾಹುಬಂಧನದ ಬೆಸುಗೆ ತವಕದ...

More Articles Like This

error: Content is protected !!
Join WhatsApp Group