- Advertisement -
ಬೀದರ – ಬೆಳ್ಳಂಬೆಳಿಗ್ಗೆಯೇ ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿರುವ ಲೋಕಾಯುಕ್ತ ಅಧಿಕಾರಿಗಳು ವಿಜಯಕುಮಾರ್ ಎಂಬ ಪೋಲಿಸ್ ಕಾನಸ್ಟೆಬಲ್ ಮನೆ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.
ಚಿಟಗುಪ್ಪ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯಕುಮಾರ್ ಗೆ ಸಂಬಂಧಿಸಿರುವ ಹುಮ್ನಾಬಾದ ಪಟ್ಟಣದ ಟೀಚರ್ ಕಾಲೋನಿಯಲ್ಲಿರುವ ಮನೆ ಹಾಗೂ ಹುಚಕನಳ್ಳಿ ಗ್ರಾಮದ ಮನೆ ಮೇಲೆ ದಾಳಿ ಮಾಡಿದ್ದಾರೆ.
- Advertisement -
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಡಿವೈಎಸ್ ಪಿ ನೇತೃತ್ವದಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು ಮಹತ್ವದ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ವರದಿ: ನಂದಕುಮಾರ ಕರಂಜೆ, ಬೀದರ