ಬೀದರ್‌ನಲ್ಲಿ ಸಚಿವ ಈಶ್ವರ ಖಂಡ್ರೆ ಜನಸ್ಪಂದನ ಕಾರ್ಯಕ್ರಮ

Must Read

ಬೀದರ: ನಗರದ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಸಚಿವ ಈಶ್ವರ ಖಂಡ್ರೆ  ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದು ವಿವಿಧ ಇಲಾಖೆಗಳಿಂದ ಮಳಿಗೆ ಹಾಕಿ, ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಿದರು.

ಅರಣ್ಯ ಇಲಾಖೆ, ಆರೋಗ್ಯ ಇಲಾಖೆ,  ಕೃಷಿ ಇಲಾಖೆ, ಕಂದಾಯ ಇಲಾಖೆ, ನಗರಸಭೆ ಸೇರಿದಂತೆ ವಿವಿಧ ಇಲಾಖೆಗಳಿಂದ ಅಹವಾಲುಗಳನ್ನು ಸ್ವೀಕರಿಸಿ ಸಾರ್ವಜನಿಕ ಸಮಸ್ಯೆಗಳನ್ನ ಶೀಘ್ರವಾಗಿ ಬಗೆಹರಿಸುವಂತೆ ಎಲ್ಲ ಇಲಾಖೆಯ ಅಧಿಕಾರಿಗಳಿಗೂ ಖಡಕ್ ಸೂಚನೆ ನೀಡಿದರು ಸಚಿವ ಈಶ್ವರ ಖಂಡ್ರೆ.

ಪೌರಾಡಳಿತ ಸಚಿವ ರಹೀಂ ಖಾನ್, ಡಿಸಿ ಗೋವಿಂದರೆಡ್ಡಿ, ಎಸ್‌ಪಿ, ಸಿಇಓ ಸಾಥ್ ನೀಡಿದರು.

ಇದೇ ವೇಳೆ ಪ್ರಧಾನಿ ಮೋದಿಯವರ ಬೆಂಗಳೂರು ಭೇಟಿಯ ಸಮಯದಲ್ಲಿ ಬಿಜೆಪಿ ನಾಯಕರಿಗೆ ಅವಮಾನ ಮಾಡಲಾಯಿತೆನ್ನಲಾದ ವಿಷಯದ ಬಗ್ಗೆ ಮಾತನಾಡಿದ ಖಂಡ್ರೆ, ಬಿಜೆಪಿ ನಾಯಕರ ಬಗ್ಗೆ ವ್ಯಥೆಯಾಗುತ್ತದೆ. ಈಗಾಗಲೇ ಹಲವು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಅರ್ಜಿ ಸಲಿಸಿದ್ದು ಅರ್ಜಿಗಳ ಬಗ್ಗೆ ಹಿರಿಯ ನಾಯಕರು ತೀರ್ಮಾನ ಮಾಡುತ್ತಾರೆ ಎಂದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group