ಶನಿ ದೇವರನ್ನು ಗೆದ್ದ ಗಣಪತಿಯ ರೋಚಕ ಕಥೆ

Must Read

ಎಲ್ಲರ ರಾಶಿಗೆ ಪ್ರವೇಶ ಪಡೆದು, 

ಕಷ್ಟ ಸುಖಗಳನ್ನು  ನೀಡಿದ ಶನಿದೇವರಿಗೆ ಗಣೇಶನನ್ನು ಕಾಡಲು ಸಾಧ್ಯವಾಗಲಿಲ್ಲ ಏಕೆ.?

ಸಗಣಿಗೆ ಗರಿಕೆ ಹುಲ್ಲನ್ನು ಯಾಕೆ ಇಡ್ತಾರೆ?

ಈ ಪೌರಾಣಿಕ ಕಥೆ ಸಂಪೂರ್ಣ ಓದಿ

🔸ಒಮ್ಮೆ ವಿಹಾರಕ್ಕೆಂದು ಹೊರಟ ಗಣೇಶನಿಗೆ ಆಕಸ್ಮಿಕವಾಗಿ ಎದುರಾಗಿದ್ದು ಈ ಶನಿರಾಜ. ಮುದ್ದು ಮುದ್ದಾಗಿ ಕಾಣುತ್ತಿದ್ದ ಗಣಪತಿಯನ್ನು ನೋಡಿದ ಶನಿರಾಜನಿಗೆ ಗಣಪತಿಯನ್ನೊಮ್ಮೆ ಹಿಡಿಯುವ ಮನಸ್ಸಾಗಿ ಗಣಪತಿಯ ಕಡೆ ಹೊರಟ. ಶನಿದೇವರು ತನ್ನ ಕಡೆಯೆ ಬರುತ್ತಿರುವುದನ್ನು ನೋಡಿ ನಡುಗಿಹೋದ ಗಣೇಶ.

ಈ ಮಹಾನುಭಾವ ನನ್ನನ್ನೇನಾದರೂ ಹಿಡಿದು ಬಿಟ್ಟರೆ ಏನು ಗತಿ ಎಂದು ಚಿಂತಿಸಿದ. ಈತನಿಗೆ ಸಿಗಲೇಬಾರದು ಎಂದು ಕೊಂಡು ಅಲ್ಲಿಂದ ಓಡತೊಡಗಿದ.

ಹಾಗೆ ಓಡುತ್ತಿದ್ದ ಗಣೇಶನನ್ನು ಕೂಗಿದ ಶನಿದೇವರು ನಿಲ್ಲುವಂತೆ ಹೇಳಿ ನಾನೇನು ನಿನಗೆ ತೊಂದರೆ ಮಾಡುವುದಿಲ್ಲ, ಒಂದೇ ಒಂದು ಕ್ಷಣ ನಿನ್ನ ಜನ್ಮರಾಶಿ ಪ್ರವೇಶಿಸಿ ಹೊರಟು ಹೋಗುತ್ತೇನೆ ಎಂದನು. ಇದಕೊಪ್ಪದ ಗಣೇಶ ನಿನ್ನ ಸಹವಾಸವೇ ಬೇಡ ಎಂದು ಹೇಳಿ ಮತ್ತೆ ಓಡತೊಡಗಿದ. ಗಣೇಶನ ಮಾತಿನಿಂದ ಕೆರಳಿದ ಶನಿದೇವರು ಏನಾದಾರಾಗಲಿ ಈತನನ್ನು ಹಿಡಿಯದೆ ಬಿಡುವುದಿಲ್ಲವೆಂದು ತಿರ್ಮಾನಿಸಿ ಗಣೇಶನ ಬೆನ್ನುಹತ್ತಿದ.

ಗಣೇಶ ಇನ್ನೂ ಜೋರಾಗಿ ಓಡತೊಡಗಿದ. ಅದರೂ ನಮ್ಮ ಡೊಳ್ಳುಹೊಟ್ಟೆಯ ಗಣೇಶನಿಗೆ ಓಡಲು ಕಷ್ಟವಾಗಿ ನಿಂತುಬಿಟ್ಟ. ಇದನ್ನು ಕಂಡು ಖುಷಿಗೊಂಡ ಶನಿದೇವರು ನಗುತ್ತಲೆ ಗಣೇಶನ ಕಡೆ ಬರತೊಡಗಿದರು. ಆಗ ನಮ್ಮ ಬುದ್ಧಿವಂತ ಗಣಪ, ಅಲ್ಲಿಯೆ ಪಕ್ಕದಲ್ಲಿ ಮೆಯ್ಯುತ್ತಿದ್ದ ಹಸುವನ್ನು ಕಂಡು ಅದರ ಮುಂದೆ ಹುಲ್ಲಿನ ಗರಿಕೆಯಾಗಿಬಿಟ್ಟ.

ಆ ಗರಿಕೆಯನ್ನು ಹಸು ತಿಂದು ಬಿಟ್ಟಿತು. ಇದನ್ನು ಗಮನಿಸಿದ ಶನಿದೇವರು ಸಹ ಹಸುವಿನ ಮುಂದೆ ಗರಿಕೆಯಾದಾಗ ಹಸು ಅದನ್ನೂ ತಿಂದುಬಿಟ್ಟಿತು. ಈಗ ಗಣೇಶನಿಗೆ ಫಜಿತಿಗಿಟ್ಟುಕೊಂಡಿತು. ಎತ್ತಹೋಗುವುದೆಂದು ತಿಳಿಯದೆ “ಹಸುವಿನ ಸಗಣಿಯ ರೂಪದಲ್ಲಿ ಆಚೆ ಬಂದ”. ಗಣೇಶ ಹಸುವಿನ ಸಗಣಿಯ ಜೊತೆ ಹೊರ ಹೋಗಿದ್ದನ್ನು ನೋಡಿದ ಶನಿದೇವರು ಅಸಹ್ಯಪಟ್ಟುಕೊಂಡು ಹೊರಟು ಹೋದರು.

ಅಂದಿನಿಂದ ಯಾವುದೇ ಶುಭ ಕಾರ್ಯಮಾಡುವಾಗ ಶನಿಯ ವಕ್ರದೃಷ್ಟಿ ಬೀಳದಿರಲೆಂದು, ಸಗಣಿ ಮತ್ತು ಗರಿಕೆಯನ್ನು ತಂದು ಸಗಣಿಯನ್ನು ಉಂಡೆ ಮಾಡಿ ಗರಿಕೆ ಮುಡಿಸಿ ಗಣೇಶನನ್ನು ಪ್ರಥಮವಾಗಿ ಪೂಜಿಸುತ್ತಾರೆ.

ಆದ್ದರಿಂದ ಎಲ್ಲಾ ಶುಭ ಕಾರ್ಯಗಳಲ್ಲಿ ಗಣೇಶನ ಪ್ರತಿಮೆ ಅಥವಾ ಪ್ರಥಮ ಪೂಜೆ ಗಣಪನಿಗೇ ಸಲ್ಲಿಸುತ್ತಾರೆ. ಇದು ಸಗಣಿಯ ಮಹತ್ವ ತಿಳಿಸುವ ಒಂದು ಪೌರಾಣಿಕ ಕಥೆ.


 ಹೇಮಂತ ಚಿನ್ನು 

ಕರ್ನಾಟಕ ಶಿಕ್ಷಕರ ಬಳಗ

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group