ಮೂಡಲಗಿ: ಕಲ್ಲೋಳಿ ಪಟ್ಟಣದಲ್ಲಿ ಭಾರತೀಯ ಜನತಾ ಪಾರ್ಟಿ ಅರಭಾವಿ ಮಂಡಲ ಯುವ ಮೋರ್ಚಾ ವತಿಯಿಂದ ದಿ. ಕಲ್ಲೋಳಿ ಸೌಹಾರ್ದ ಸಹಕಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ “ಸೇವಾ ಪಾಕ್ಷಿಕ” ಅಭಿಯಾನದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಜರುಗಿತು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ, ಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ ಮಾತನಾಡಿ, ದೇಶದಲ್ಲಿ ಪ್ರಧಾನಿ ಮೋದಿ ಅವರು ಮಾಡಿರುವ ಅಭಿವೃದ್ಧಿಯ ಕಾರ್ಯಗಳನ್ನು ಕಾರ್ಯಕರ್ತರು ಜನರಿಗೆ ತಲುಪಿಸಬೇಕೆಂದರು.
ಈ ಸಮಯದಲ್ಲಿ ಅರಭಾವಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಶಾಸಕರ ಆಪ್ತ ಸಹಾಯಕರಾದ ಅಬ್ದುಲ್ ಮಿರ್ಜಾನಾಯಕ್, ಅರಬಾವಿ ಮಂಡಲ ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಮುತೇಪ್ಪಾ ಮನ್ನಾಪುರ, ಗುರು ಹಿರೇಮಠ, ಮಹಾಂತೇಶ ಕುಡಚಿ, ಸಿದ್ದಣ್ಣ ದುರದುಂಡಿ, ಯಲ್ಲಾಲಿಂಗ ವಾಳದ, ಸೇವಾ ಪಾಕ್ಷಿಕ ಅಭಿಯಾನದಲ್ಲಿ ಬಿಜೆಪಿಯ ಮುಖಂಡರು ಮಂಡಲದ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.