ಇಂದು ಮೂಡಲಗಿಯಲ್ಲಿ ಗಾಳಿಪಟ ಉತ್ಸವ

Must Read

ಮೂಡಲಗಿ: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ನ.1ರಂದು ಮಧ್ಯಾಹ್ನ 2:30ಕ್ಕೆ ಪಟ್ಟಣದ ಎಸ್.ಎಸ್.ಆರ್ ಕಾಲೇಜು ಮೈದಾನದಲ್ಲಿ ಗಾಳಿಪಟ ಉತ್ಸವವನ್ನು ಆಚರಿಸಲಾಗುತ್ತಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕಾ ಘಟಕ ಮೂಡಲಗಿಯ ಅಧ್ಯಕ್ಷ ಕೃಷ್ಣಪ್ಪ ಗಿರೆನ್ನವರ ಹಾಗೂ ಯುವ ಜೀವನ ಸೇವಾ ಸಂಸ್ಥೆಯ ಅಧ್ಯಕ್ಷ ಓಂ ಸಂತೋಷ ತಿಳಿಸಿದ್ದಾರೆ.

ನ.1ರಂದು ಮಧ್ಯಾಹ್ನ ತಾಲೂಕಾ ಆಡಳಿತ, ಮೂಡಲಗಿ ಶಿಕ್ಷಣ ಸಂಸ್ಥೆ, ಯುವ ಜೀವನ ಸೇವಾ ಸಂಸ್ಥೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮೂಡಲಗಿ ತಾಲೂಕಾ ಘಟಕದ ಆಶ್ರಯದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ ಶಿವಾನಂದ ಬಬಲಿ ವಹಿಸುವರು.

ಗಾಳಿಪಟ ಉತ್ಸವಕ್ಕೆ  ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಚಾಲನೆ ನೀಡುವರು.

ಸಂಜೆ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ದೀಪಗಳ ಬಲೂನಗಳನ್ನು ಆಕಾಶಕ್ಕೆ ಹಾರಿಸುವ  ಕಾರ್ಯಕ್ರಮ ಜರುಗಲಿದ್ದು, ಈ ಸಮಯದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗಣ್ಯರು ಉಪಸ್ಥಿತರಿರುವರು ಎಂದು ಕಾನಿಪ ಪ್ರಧಾನ ಕಾರ್ಯದರ್ಶಿ ಮಲ್ಲು ಬೊಳನ್ನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group