ರಾಷ್ಟ್ರೀಯ ಮತದಾರರ ದಿನಾಚರಣೆ

Must Read

ಸಿಂದಗಿ; ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿರುವ ವಿಶಿಷ್ಟ ಪ್ರತಿಭೆಯನ್ನು ಪರಿಚಯಿಸಲು ಇದೊಂದು ಉತ್ತಮ ವೇದಿಕೆಯಾಗಿದೆ ಇಂತಹ ಸ್ಪರ್ಧೆಗಳ ಸದುಪಯೋಗ ಪಡೆಯಬೇಕೆಂದು ಸಿ.ಎಂ.ಮನಗೂಳಿ ಕಾಲೇಜಿ ನಿವೃತ್ತ ಪ್ರಾಧ್ಯಾಪಕ ಬಿ ಎನ್ ಪಾಟೀಲ್ ಇಬ್ರಾಹಿಂಪುರ್ ಹೇಳಿದರು.

ಪಟ್ಟಣದ ಸರಕಾರಿ ಪದವಿ ಮಹಾವಿದ್ಯಾಲಯದಲ್ಲಿ 2023-24 ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ತಾಲೂಕ ಮಟ್ಟದ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಪ್ರತಿಯೊಬ್ಬ ಯುವ ಮತದಾರ ಸಮರ್ಥ ಆಡಳಿತಗಾರರನ್ನು ಆಯ್ಕೆ ಮಾಡಲು ಜಾಗೃತರಾಗಬೇಕು ಅದಕ್ಕಾಗಿ ಉತ್ತಮ ಒಳ್ಳೆಯ ಆಲೋಚನೆಗಳನ್ನು ಹೊಂದಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಎಸ್ ಎಸ್ ಹಳೆಮನಿ ಮಾತನಾಡಿ, ಇಂದು ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳು ಕುಸಿಯುತ್ತಿದ್ದು ಇದು ಕಳವಳಕಾರಿ ಯಾಗಿದೆ ಅದಕ್ಕಾಗಿ ವಿದ್ಯಾರ್ಥಿಗಳು ಮಹನೀಯರ ಜೀವನ ಚರಿತ್ರೆ ಅಧ್ಯಯನ ಮಾಡಬೇಕು ಎಂದು ಕರೆಕೊಟ್ಟರು.

ಐ ಕ್ಯೂ ಏ ಸಿ ಸಂಯೋಜಕರಾದ ಎಸ್ ಎಸ್ ಖಾದ್ರಿ ಮಾತನಾಡಿದರು. ಸಿಂದಗಿ ಹಾಗೂ ಅಲಮೆಲ ತಾಲೂಕಿನ ಪದವಿ ಕಾಲೇಜುಗಳು ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆ ರಸಪ್ರಶ್ನೆ ಸ್ಪರ್ಧೆ ಬಿತ್ತಿ ಚಿತ್ರ ಸ್ಪರ್ಧೆ ಗಳಲ್ಲಿ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಜಿಎನ್ ತೇಜಸ್ವಿನಿ ಸ್ವಾಗತಿಸಿದರು ಆರ್ ಎಸ್ ಗಾಯಕವಾಡ ನಿರೂಪಿಸಿದರು.

ಡಾ, ಲಕ್ಷ್ಮಿಕಾಂತ್ ಹೂಗಾರ್ ವಂದಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group