ಕರ್ನಾಟಕ ಸರ್ಕಾರವು ವಿಕಲಚೇತನ ಸೇವಾ ಕ್ಷೇತ್ರದಲ್ಲಿ ಅನುಪಮ ಸೇವೆಯನ್ನು ಪರಿಗಣಿಸಿ ಪ್ರಸ್ತುತ 2023ನೇ ಸಾಲಿನ ಉತ್ತಮ ಸಂಸ್ಥೆಯ ವಿಭಾಗದಡಿ ಪೇರೆಂಟ್ಸ್ ಅಸೋಸಿಯೇಷನ್ ಆಫ್ ಡೆಫ್ ಚಿಲ್ಡ್ರನ್, ಮೈಸೂರು ಸಂಸ್ಥೆಗೆ ರಾಜ್ಯ ಪ್ರಶಸ್ತಿಯನ್ನು ನೀಡಿದೆ.
ಈ ಪ್ರಶಸ್ತಿಯನ್ನು ಅಂಗವಿಕಲರ ದಿನಾಚರಣೆಯ ದಿನವಾದ ಡಿಸೆಂಬರ್ 3 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿಗಳು ಪ್ರದಾನ ಮಾಡಲಿದ್ದಾರೆ.
ಪೇರೆಂಟ್ಸ್ ಅಸೋಸಿಯೇಷನ್ ಆಫ್ ಡೆಫ್ ಚಿಲ್ಡ್ರನ್, ಮೈಸೂರು ಸಂಸ್ಥೆಯು 42 ವರ್ಷಗಳಿಂದ ಶ್ರವಣದೋಷವುಳ್ಳ ಮಕ್ಕಳಿಗೆ ಪೂರ್ವ ಪ್ರಾಥಮಿಕ ತರಬೇತಿಯನ್ನು ನೀಡುತ್ತಾ ಬರುತ್ತಿದೆ.
ಸಮಾರಂಭಕ್ಕೆ ಸಕಲರಿಗೆ ಸ್ವಾಗತವಿದೆ ಎಂದು ಪೇರೆಂಟ್ಸ್ ಅಸೋಸಿಯೇಷನ್ ಆಫ್ ಡೆಫ್ ಚಿಲ್ಡ್ರನ್ ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಸ್ಯ ಎಂ.ಮಲ್ಲಿಕಾರ್ಜುನ ತಿಳಿಸಿದ್ದಾರೆ. ಅವರ ಮೊಬೈಲ್ ಸಂಖ್ಯೆ 9480473357