ಸಿ.ಎಂ. ಬೂದಿಹಾಳ ಅವರಿಗೆ ಸೇವಾರತ್ನ ಪ್ರಶಸ್ತಿ

0
242

ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದಕ್ಕಾಗಿ ನಿವೃತ್ತ ಪ್ರೌಢ ಶಾಲಾ ಶಿಕ್ಷಕರಾದ  ಸಿ.ಎಂ. ಬೂದಿಹಾಳ ಅವರು ಬೆಳಗಾವಿ ನಾಗನೂರ ರುದ್ರಾಕ್ಷಿ ಮಠದಿಂದ ಕೊಡಮಾಡುವ ‘ಸೇವಾರತ್ನ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜಾಗತಿಕ ಲಿಂಗಾಯತ ಮಹಾಸಭಾದ ಮಹಾನಗರದ ಪ್ರಧಾನ ಕಾರ್ಯದರ್ಶಿ ಆಗಿರುವ ಶ್ರೀಯುತರಿಗೆ ದಿನಾಂಕ 8- 12 – 2023ರಂದು ಜರುಗುವ ಪೂಜ್ಯ ಶ್ರೀ ಡಾ. ಶಿವಬಸವ ಮಹಾಸ್ವಾಮಿಗಳವರ 134 ನೆಯ ಜಯಂತಿ ಮಹೋತ್ಸವದ ಸಂದರ್ಭದಲ್ಲಿ ಪೂಜ್ಯರು ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.