ಬೀದರ – ನಗರದಲ್ಲಿ ಈ ದಿನ ಬೆಳ್ಳಂಬೆಳಿಗ್ಗೆಯೇ ಲೋಕಾಯುಕ್ತರು ಸದ್ದು ಮಾಡಿದ್ದು ಏಕಕಾಲಕ್ಕೆ ಮೂರು ಕಡೆ ದಾಳಿ ಮಾಡಿ ಹಲವು ದಾಖಲೆ ವಶಪಡಿಸಿಕೊಂಡಿದ್ದಾರೆ.
ಪಶು ವಿವಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯ ಗುರಿಯಾಗಿಟ್ಟುಕೊಂಡು ದಾಳಿ ನಡೆದಿದ್ದು ಬೀದರ್ ನ ಗುಮ್ಮೆ ಕಾಲೋನಿಯಲ್ಲಿರುವ ನಿವಾಸ ಹಾಗೂ ಮೈಲೂರು ಕ್ರಾಸ್ ನಲ್ಲಿರುವ ಕಾಂಪ್ಲೆಕ್ಸ್ ಮೇಲೆ ದಾಳಿ ಮಾಡಲಾಗಿದೆ.
ಈ ನಿವಾಸ ಹಾಗೂ ಕಾಂಪ್ಲೆಕ್ಸ್ ಪಶು ವಿವಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಸುನೀಲ್ ಎಂಬ ಸಿಬ್ಬಂದಿಗೆ ಸಂಬಂಧಿಸಿದ್ದು ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.
ಇತ್ತ ಬೆಂಗಳೂರಿನಲ್ಲಿ ಬೀದರ್ ನ ಪಶು ವಿವಿಯಲ್ಲಿ ಕೆಲಸ ಮಾಡಿ ನಿವೃತ್ತಿಯಾದ ಉಪ ಕುಲಪತಿಗಳ ನಿವಾಸದ ಮೇಲೂ ದಾಳಿ ನಡೆದಿದೆ. ನಿವೃತ್ತ ಉಪ ಕುಲಪತಿ ನಾರಾಯಣ ಸ್ಚಾಮಿ ಎಂಬುವರ ಬೆಂಗಳೂರಿನ ನಿವಾಸ ಮೇಲೆ ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಓಲೇಕಾರ ನೇತ್ರತ್ವದಲ್ಲಿ ದಾಳಿ ನಡೆಸಲಾಗಿದೆ.
ವರದಿ: ನಂದಕುಮಾರ ಕರಂಜೆ, ಬೀದರ