ಸರ್ವೋಚ್ಛ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ-ಸಂಸದ ಈರಣ್ಣ ಕಡಾಡಿ

Must Read

ಮೂಡಲಗಿ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸರ್ವೋಚ್ಛ ನ್ಯಾಯಾಲಯ ಪಂಚ ಸದಸ್ಯ ಸಾಂವಿಧಾನಿಕ ಪೀಠ ಎತ್ತಿ ಹಿಡಿಯುವ ಮೂಲಕ ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂದು ಸಾಬೀತಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸುಪ್ರೀಂ ಕೋರ್ಟ್‍  ನೀಡಿರುವ ತೀರ್ಪನ್ನು ಸ್ವಾಗತಿಸಿದ್ದಾರೆ.

        ಸೋಮವಾರ ಡಿ-11 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ದೇಶದ ಸಮಗ್ರತೆ, ಅಖಂಡತೆಗೆ ಧಕ್ಕೆಯಾಗಿದ್ದ 370 ಕಲಂ ಅಡಿ ವಿಶೇಷ ಸ್ಥಾನಮಾನ ರದ್ದು ಮಾಡಲು ಜನಸಂಘದ ನಾಯಕ  ಶ್ಯಾಮಾ ಪ್ರಸಾದ್ ಮುಖರ್ಜಿಯವರು ಪ್ರಯತ್ನ ಆರಂಭಿಸಿದ್ದರು. 2019ರ ಆಗಸ್ಟ್ 6 ರಂದು ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ ಲಡಾಖ್, ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿ ಶ್ಯಾಮಾ ಪ್ರಸಾದ್ ಮುಖರ್ಜಿಯವರ ಆ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವರಾದ ಅಮಿತ ಶಾ ಸಾಕಾರಗೊಳಿಸಿದರು. ಅಷ್ಟೇ ಅಲ್ಲದೇ 2024ರ ಸೆಪ್ಟೆಂಬರ್ 30ರ ಒಳಗಡೆ  ವಿಧಾನಸಭಾ ಚುನಾವಣೆ ನಡೆಸಬೇಕೆಂದು ಚುನಾವಣಾ ಆಯೋಗಕ್ಕೆ ನ್ಯಾಯಾಲಯ ಸೂಚಿಸಿದೆ. ಜಮ್ಮು & ಕಾಶ್ಮೀರ, ಲಡಾಖ್‍ನ ಸರ್ವತೋಮುಖ ಅಭಿವೃದ್ಧಿ ಹಾಗೂ ಭಾರತದ ಏಕತೆಯ ದೃಷ್ಟಿಯಿಂದ ಇದು ಅತ್ಯಂತ ಮಹತ್ವದ ತೀರ್ಮಾನ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವರಾದ ಅಮಿತ ಶಾ ಅವರಿಗೆ ಸಂಸದ ಈರಣ್ಣ ಕಡಾಡಿ ಅವರು ಹಾರ್ದಿಕ ಅಭಿನಂದನೆಗಳನ್ನು ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group