ಮಹಿಳೆಯ ಮೇಲೆ ಹಲ್ಲೆಗೆ ಬಿಜೆಪಿ ನಾಯಕರ ಖಂಡನೆ

Must Read

ಮೂಡಲಗಿ: ಬೆಳಗಾವಿ ಜಿಲ್ಲೆಯ ಹೊಸ ವಂಟಮೂರಿ ಗ್ರಾಮದಲ್ಲಿ ಪರಿಶಿಷ್ಟ ಪಂಗಡದ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿ ನಂತರ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಘಟನೆ ಅತ್ಯಂತ ಖಂಡನೀಯ. ಚಳಿಗಾಲ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿಯೇ ಇಂತಹ ಘಟನೆ ನಡೆದಿರುವುದು ರಾಜ್ಯದ ಕಾನೂನು ಸುವ್ಯವಸ್ಥೆಗೆ ಹಿಡಿದಿರುವ ಕನ್ನಡಿಯಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ದಲಿತ ಮಹಿಳೆಯ ಮೇಲೆ ನಡೆದ ಈ ಹೇಯ ಕೃತ್ಯವನ್ನು ಖಂಡಿಸಿ ಆ ಕುಟುಂಬಕ್ಕೆ ನ್ಯಾಯ ಒದಗಿಸಲು ಕೋರಿ  ಸಂಸತ್ತಿನ ಗಾಂಧಿ ಪ್ರತಿಮೆಯ ಬಳಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹಾಗೂ ರಾಜ್ಯದ ಬಿಜೆಪಿ ಸಂಸದರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆಸಿದ ಪ್ರತಿಭಟನೆ ನಡೆಸಿದರು.

ಸಂಸದರಾದ ನಳಿನಕುಮಾರ ಕಟೀಲ್‌, ಸದಾನಂದಗೌಡ, ಪಿ.ಸಿ ಮೋಹನ. ಕೆ. ನಾರಾಯಣ, ರಮೇಶ ಜಿಗಜಿಣಗಿ, ಜಿ.ಎಂ. ಸಿದ್ದೇಶ್ವರ್, ವೈ.ದೇವೇಂದ್ರಪ್ಪ ಜಿ.ಎಸ್.ಬಸವರಾಜ ಸೇರಿದಂತೆ ಅನೇಕ ಸಂಸದರು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group