ಕಲ್ಲೋಳಿ: ಇತ್ತೀಚೆಗೆ ಮೂಡಲಗಿಯ ಎಂ.ಇ.ಎಸ್. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಜರುಗಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಏಕವಲಯ ಅಂತರ ಮಹಾವಿದ್ಯಾಲಯಗಳ ಪುರುಷರ ಖೋ-ಖೋ ಪಂದ್ಯಾವಳಿ ಹಾಗೂ ವಿಶ್ವವಿದ್ಯಾಲಯ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ಖೋ-ಖೋ ತಂಡ ಭಾಗವಹಿಸಿ ತೃತೀಯ ಸ್ಥಾನ ಪಡೆದಿದೆ ಹಾಗೂ ಕುಮಾರ ಸಂತೋಷ ಕರೋಳಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಖೋ-ಖೋ ಆಟಗಾರ (ಯುನಿವರ್ಸಿಟಿ ಬ್ಲ್ಯೂ) ಆಗಿ ಆಯ್ಕೆಯಾಗಿದ್ದಾನೆ.
ಈತನು ಜನವರಿ ತಿಂಗಳಿನಲ್ಲಿ ಕೇರಳದ ಕ್ಯಾಲಿಕಟ್ ವಿಶ್ವವಿದ್ಯಾಲಯದಲ್ಲಿ ಜರುಗುವ ದಕ್ಷಿಣ ವಲಯ ಅಂತರವಿಶ್ವವಿದ್ಯಾಲಗಳ “ಖೋ-ಖೋ” ಸ್ಪರ್ಧೆಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲಿದ್ದಾನೆ.
ಇವರನ್ನು ಸಂಸ್ಥೆಯ ಚೇರಮನ್ನರಾದ ಬಸಗೌಡ ಶಿ. ಪಾಟೀಲ, ಆಡಳಿತ ಮಂಡಳಿಯ ಎಲ್ಲ ಸದಸ್ಯರು, ಪ್ರಾಚಾರ್ಯ ಡಾ. ಸುರೇಶ ಹನಗಂಡಿ, ದೈಹಿಕ ನಿರ್ದೇಶಕ ಬಿ. ಕೆ ಸೊಂಟನವರ ಹಾಗೂ ಬೋಧಕ/ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.