ಜಲ್ ಜೀವನ ಮಿಷನ್ ಯೋಜನೆ ಕಾಮಗಾರಿಗಳ ಪರಿಶೀಲನೆ

0
423

ಬೆಳಗಾವಿ – ದಿನಾಂಕ 28-12-2023 ರಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ಜಲ್ ಜೀವನ ಮಿಷನ್ ಕಾಮಗಾರಿಗಳು ಪರಿಶೀಲನೆ ಮಾಡಿದರು.

ಚಿಕ್ಕೋಡಿ ವಿಭಾಗ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಇವರು ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮ ಪಂಚಾಯತಿಯ, ಕೇರೂವಾಡಿ, ಗ್ರಾಮ, ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮ ಪಂಚಾಯಿತಿಯ ಜಲ ಜೀವನ್ ಮಿಷನ್ ಯೋಜನೆಗಳ  ಕಾಮಗಾರಿಗಳ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. 

ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಭಿಯಂತರರು ಚಿಕ್ಕೋಡಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಉಪ ವಿಭಾಗ ಚಿಕ್ಕೋಡಿ, ಅಥಣಿ, ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ, ಸದಸ್ಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಯೋಜನಾ ವ್ಯವಸ್ಥಾಪಕರು, ಸಹಾಯಕ ಎಂಜಿನಿಯರ್,ಸಿಬ್ಬಂದಿಗಳು, ಗ್ರಾಮಸ್ಥರು, ಉಪಸ್ಥಿತರಿದ್ದರು.