ಸಿಂದಗಿ ಜಿಲ್ಲಾ ರಚನೆಗೆ ಒತ್ತಾಯಿಸಲು ಬೆಂಗಳೂರಿಗೆ ನಿಯೋಗ

Must Read

ಸಿಂದಗಿ: ಸಿಂದಗಿ ಜಿಲ್ಲೆ ರಚನೆ ಮಾಡಲು ಒತ್ತಾಯಿಸಿ ಆರಂಭಗೊಂಡ ಹೋರಾಟದ ಹಿನ್ನೆಲೆಯಲ್ಲಿ ಜ.11 ರ ನಂತರ ಬೆಂಗಳೂರಿಗೆ ನಿಯೋಗವೊಂದನ್ನು ತೆಗೆದುಕೊಂಡು ಹೋಗಲಾಗುವುದು ಎಂದು ಶಾಸಕ ಆಶೋಕ ಮನಗೂಳಿ ಹೇಳಿದರು.

ಪಟ್ಟಣದ ಬಸವ ಮಂಟಪದಲ್ಲಿ ಭಾನುವಾರ ಸಂಜೆ ನಡೆದ ಸಿಂದಗಿ ಜಿಲ್ಲೆ ಬೇಡಿಕೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾಜಿ ಶಾಸಕರಾದ ಶರಣಪ್ಪ ಸುಣಗಾರ, ರಮೇಶ ಭೂಸನೂರ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ಸಾಹಿತಿಗಳು, ಸಂಘಟನೆ ಪ್ರಮುಖರನ್ನೊಳಗೊಂಡ 10 ಜನರ ನಿಯೋಗ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಕಂದಾಯ ಸಚಿವ, ಸರ್ಕಾರದ ಕಾರ್ಯದರ್ಶಿ ಅವರನ್ನು ಭೇಟಿ ಮಾಡಿ ಸಿಂದಗಿ ಜಿಲ್ಲೆಯನ್ನಾಗಿ ರಚನೆ ಮಾಡುವಂತೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ ಅವರು, ಕಲಂ 371ಗೆ ಸೇರ್ಪಡೆಯಾಗುವಲ್ಲಿ ಈ ಭಾಗಕ್ಕೆ ಅನ್ಯಾಯವಾಗಿದೆ ಹಾಗೆ ಆಗಕೂಡದು ಎಂದು ಸರಕಾರಕ್ಕೆ ಮನವರಿಕೆ ಮಾಡುವುದು ಅಲ್ಲದೆ ಸಿಂದಗಿಯನ್ನು ನಗರಸಭೆಯನ್ನಾಗಿ ಮಾರ್ಪಾಡು ಮಾಡುವ ಕುರಿತು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಬ್ರಿಟೀಷರ ಕಾಲದಲ್ಲಿ ಸಮೀಕ್ಷೆ ಮಾಡಲಾಗಿದ್ದ ಶೇಡಬಾಳ ಸಿಂದಗಿ ಶಹಾಬಾದ ರೇಲ್ವೆ ಮಾರ್ಗ ಆರಂಭಗೊಳ್ಳುವ ದಿಸೆಯಲ್ಲಿ ಹೋರಾಟ ಕೈಗೊಳ್ಳುವ ಕುರಿತು ಮಾತನಾಡಿದರು.

ಇದೇ ಸಂದರ್ಭದಲ್ಲಿ ಸಿಂದಗಿ ಅಭಿವೃದ್ಧಿ ವಿಷಯಕ್ಕೆ ಸಂಬಂಧಿಸಿದಂತೆ ಮಕ್ಕಳ ಸಾಹಿತಿ ಹ.ಮ.ಪೂಜಾರ ಮಾತನಾಡಿ, ರೇಲ್ವೆ ಮಾರ್ಗ ತೀರ ಅಗತ್ಯವಾಗಿದ್ದು ಈ ಬಗ್ಗೆ ಶಾಸಕರು ಹೆಚ್ಚಿನ ಮುತುವರ್ಜಿ ವಹಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ ಸಿಂದಗಿ, ಜಿಲ್ಲೆ ರಚನೆ ಕುರಿತು ಪಕ್ಷಾತೀತವಾಗಿ ಮತಕ್ಷೇತ್ರದ ಶಾಸಕರು, ಮಾಜಿ ಶಾಸಕರು ಒಂದುಗೂಡಿ ಹೋರಾಟಕ್ಕೆ ಸಜ್ಜಾಗಿರುವುದು ವಿಶೇಷವಾಗಿದೆ. ಜಿಲ್ಲೆಯಾಗುವ ಕಾಲ ಸನ್ನಿಹಿತವಾಗಿದೆ. ಹೋರಾಟ ನಿರಂತರವಾಗಿರಬೇಕು ಎಂದು ವಿವಿಧ ಸಂಘಟನೆಗಳಿಗೆ ಮನವಿ ಮಾಡಿದರು.

ನಗರ ಸುಧಾರಣಾ ವೇದಿಕೆ ಅಧ್ಯಕ್ಷ ಅಶೋಕ ಅಲಾಪೂರ ಪಾಸ್ತಾವಿಕವಾಗಿ ಮಾತನಾಡಿದರು.

ವಿವಿಧ ರಾಜಕೀಯ ಪಕ್ಷಗಳ ಮುಖಂಡರಾದ ಬಹುಜನ ಸಮಾಜ ಪಾರ್ಟಿ ರಾಜ್ಯ ಘಟಕದ ಪ್ರಮುಖ ದಸ್ತಗೀರ ಮುಲ್ಲಾ, ಬಿಜೆಪಿ ಮಂಡಲ ಅಧ್ಯಕ್ಷ ಈರಣ್ಯ ರಾವೂರ, ಬ್ಲಾಕ್, ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುರೇಶ ಪೂಜಾರಿ, ಜೆಡಿಎಸ್ ಪ್ರಮುಖ ಪ್ರಕಾಶ ಹಿರೇಕುರುಬರ, ಕರವೇ ರಾಜ ಘಟಕದ ಸಂಚಾಲಕ ಸಂತೋಷ ಪಾಟೀಲ ಡಂಬಳ, ರಾಷ್ಟ್ರೀಯ ಬಸವದಳದ ಶಿವಾನಂದ ಕಲಬುರ್ಗಿ, ದಸಂಸ ಪ್ರಮುಖ ವೈ.ಸಿ.ಮಯೂರ, ರಣಧೀರ ಪಡೆ ಸಂಚಾಲಕ ಸಂತೋಷ ಮಣಿಗೇರಿ, ಶಿಲ್ಪಾ ಕುದರಗೊಂಡ, ಸುನಂದಾ ಯಂಪೂರೆ ಮಹಾನಂದ ಬಮ್ಮಣ್ಣಿ, ಮಲ್ಲಿಕಾರ್ಜುನ ಅಲ್ಲಾಪೂರ, ದಾನಪ್ಪ ಜೋಗುರ, ಯಶವಂತ್ರಾಯಗೌಡ ರೂಗಿ, ಮಹಾದೇವಿ ಹಿರೇಮಠ, ಶೈಲಜಾ ಸ್ಥಾವರಮಠ ಸೇರಿದಂತೆ ಮಹಿಳಾ ಪ್ರತಿನಿಧಿಗಳು, ಸಾಹಿತಿಗಳು, ಬಸವದಳದ ಸದಸ್ಯರು, ದಲಿತ ಮುಖಂಡರು, ಮಾಧ್ಯಮ ಮಿತ್ರರು ಹಾಗೂ ವಿವಿಧ ಸಂಘಟನೆಗಳ ಅಧ್ಯಕ್ಷರು, ಸಂಚಾಲಕರು, ಪದಾಧಿಕಾರಿಗಳು ಭಾಗವಹಿಸಿದ್ದರು ಸೇರಿದಂತೆ ಅನೇಕರು ಇದ್ದರು.

Latest News

ಗಾರ್ಡನ್ ಅಭಿವೃದ್ದಿಗೆ  ರೂ.೨೩.೩೯ ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಅಶೋಕ ಮನಗೂಳಿ ಚಾಲನೆ

ಸಿಂದಗಿ; ಆಯಾ ವಾರ್ಡುಗಳು ಸಾರ್ವಜನಿಕರು, ವಯೋ ವೃದ್ಧರು ವಾಯು ವಿಹಾರಕ್ಕೆ ಅನುಕೂಲವಾಗಲೆಂದು ಪಟ್ಟಣದ ಎಲ್ಲ ಉದ್ಯಾನವನಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತಿದೆ. ಪಟ್ಟಣದಲ್ಲಿ ಒಟ್ಟು ೭೨...

More Articles Like This

error: Content is protected !!
Join WhatsApp Group