ಮೈಸೂರು: ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶಾರದಾ ವಿಲಾಸ ಪದವಿ ಪೂರ್ವ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಜ.12ರಂದು ಶುಕ್ರವಾರ ಬೆಳಿಗ್ಗೆ 10.30ಕ್ಕೆ ವಿದ್ಯಾರ್ಥಿ ವೇದಿಕೆ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ.
ಮುಖ್ಯ ಅತಿಥಿಯಾಗಿ ಮೈಸೂರಿನ ಅಪರ ಜಿಲ್ಲಾಧಿಕಾರಿಗಳಾದ ಆರ್.ಲೋಕನಾಥ್ ಅವರು ಭಾಗವಹಿಸಲಿದ್ದಾರೆ. ವಿಶೇಷ ಆಹ್ವಾನಿತವಾಗಿ ಸಂಸ್ಥೆ ಅಧ್ಯಕ್ಷರಾದ ಡಾ.ಬಿ.ಎಂ.ಸುಬ್ರಾಯ, ಗೌರವ ಕಾರ್ಯದರ್ಶಿಗಳಾದ ಎನ್.ಚಂದ್ರಶೇಖರ್ ಉಪಸ್ಥಿತರಿರುತ್ತಾರೆ. ಕಾಲೇಜಿನ ಪ್ರಾಂಶುಪಾಲರಾದ ಸಿ.ಕೆ.ಅಶೋಕಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವಾಗಿ ನೃತ್ಯ, ಸಂಗೀತ, ಹಾಡುಗಾರಿಕೆ, ಕಿರುನಾಟಕ ಏರ್ಪಡಿಸಲಾಗಿದೆ.