ಸಮಾನ ವೇತನಕ್ಕೆ ಆಗ್ರಹಿಸಿ ಸಂಸದರ ಕಚೇರಿ ಚಲೋ

Must Read

ಮೂಡಲಗಿ – ಆಹಾರ, ಆರೋಗ್ಯ, ಶಿಕ್ಷಣ ಉಳಿಸಿ, ದೇಶವನ್ನು ಅಭಿವೃದ್ಧಿಪಡಿಸಿ ದುಡಿಯುವ ವರ್ಗಕ್ಕೆ ಸಮಾನ ವೇತನ ನೀಡಲು ಒತ್ತಾಯಿಸಿ ಜನವರಿ 23 ರಿಂದ 24 ರವರೆಗೆ 2 ಕೋಟಿ ಸಹಿ ಸಂಗ್ರಹದೊಂದಿಗೆ ಸಂಸದರ ಕಚೇರಿ ಚಲೋ ಜಾಥಾ ಕಾರ್ಯಕ್ರಮವನ್ನು  ಕುಲಗೋಡ     ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು..

ಗ್ರಾಮ ಪಂಚಾಯತ ನೌಕರರು, ಅಂಗನವಾಡಿ ಕಾರ್ಯಕರ್ತರು, ಬಿಸಿ ಊಟ ನೌಕರರು ಕುಲಗೋಡ ಗ್ರಾಮ ಪಂಚಾಯತ ಕಾರ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗ್ರಾಮ ಪಂಚಾಯತ ನೌಕರರ ಸಂಘದ ಗೋಕಾಕ ತಾಲೂಕ ಅಧ್ಯಕ್ಷ ಮಡ್ಡೆಪ್ಪ ಭಜಂತ್ರಿ ಮಾತನಾಡಿ ದುಡಿಯುವ ವರ್ಗಕ್ಕೆ ಸಮಾನ ವೇತನ, ಸೇವಾ ಭದ್ರತೆಗೆ ಸರ್ಕಾರದ ಗಮನ ಸೆಳೆಯಲು ಇಂತಹ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು ಅವಶ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ದೊಡ್ಡವ್ವ ಪೂಜೇರಿ, ಬಿಸಿಯೂಟ ನೌಕರರ ಸಂಘದ ಮೂಡಲಗಿ ತಾಲೂಕಾ ಅಧ್ಯಕ್ಷೆ ಪಾರ್ವತಿ ಕೌಜಲಗಿ, ಗ್ರಾಮ ಪಂಚಾಯತ ನೌಕರರ ಸಂಘದ ಮೂಡಲಗಿ ತಾಲೂಕಾ ಅಧ್ಯಕ್ಷ ರಮೇಶ ಹೋಳಿ, ಉಪಾಧ್ಯಕ್ಷ ಬಸವರಾಜ ಈ ಮಿರ್ಜಿ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group