ಜ. 23ರಂದು ನೇತಾಜಿ ಸುಭಾಷಚಂದ್ರ ಬೋಸ್ ಜಯಂತಿ ಆಚರಣೆ

Must Read

ಮೂಡಲಗಿ: ಇಲ್ಲಿಯ ಪುರಸಭೆ ಹಾಗೂ ನೇತಾಜಿ ಇಂಟಿಗ್ರೇಟೆಡ್ ರೂರಲ್ ಡೆವೆಲೆಪ್‍ಮೆಂಟ್ ಸೊಸೈಟಿ ಇವರ ಸಹಯೋಗದಲ್ಲಿ ಇದೇ ಜ. 23ರಂದು ಬೆಳಿಗ್ಗೆ 11ಕ್ಕೆ ಸ್ಥಳೀಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸುಭಾಷಚಂದ್ರ ಬೋಸ್ ಅವರ 127ನೇ ಜಯಂತ್ಯುತ್ಸವ ಆಚರಣೆ ಮಾಡಲಿದ್ದಾರೆ.

ಇದೇ ಸಂದರ್ಭದಲ್ಲಿ ಸ್ವಚ್ಛತಾ ಅಭಿಯಾನ ಕುರಿತು ಪಟ್ಟಣದಲಿ ಶಾಲಾ ವಿದ್ಯಾರ್ಥಿಗಳಿಂದ ಜನಜಾಗೃತಿಯ ಜಾಥಾ ಏರ್ಪಡಿಸಿರುವರು. 

ಘನ ತ್ಯಾಜ್ಯ ವಸ್ತುಗಳ ವೈಜ್ಞಾನಿಕ ವಿಲೇವಾರಿ ಮತ್ತು ಸ್ವಚ್ಛತೆ ಕುರಿತು ಪ್ರೌಢ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಚಿತ್ರಕಲೆ, ಪ್ರಬಂಧ ಮತ್ತು ಭಾಷಣ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಗುವುದು ಎಂದು ಸಂಘಟಕರಾದ ನೇತಾಜಿ ಸಂಸ್ಥೆಯ ಅಧ್ಯಕ್ಷ ಈರಣ್ಣ ಕೊಣ್ಣೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group