- Advertisement -
ಕಸ್ತೂರಿ ಸಿರಿಗನ್ನಡ ವೇದಿಕೆ (ರಿ)ಬೆಳಗಾವಿ ವತಿಯಿಂದ ನೀಡುವ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಗೌರವ ಪುರಸ್ಕಾರ ಪ್ರದಾನ ಸುಸಂದರ್ಭದಲ್ಲಿ ರಾಷ್ಟ್ರಮಟ್ಟದ ವಿಶ್ವ ಜ್ಞಾನಶ್ರೀ ಪುರಸ್ಕಾರ ಪ್ರಶಸ್ತಿಯನ್ನು ಪ್ರೌಢಶಾಲಾ ಶಿಕ್ಷಕರು ಮತ್ತು ಕವಿ ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿ ಎಚ್ ಎಸ್ ನಿಜಗುಣಯ್ಯ ಅವರಿಗೆ ನೀಡಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ಡಾ ಬಿ ಆರ್ ಅಂಬೇಡ್ಕರ್ ವಸತಿ ಶಾಲೆ ನೊಣವಿನಕೆರೆ ತಿಪಟೂರು ತಾ ತುಮಕೂರು ಜಿಲ್ಲೆ ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿಗಳು ಇವರು ಮೂಲ ಹುಲ್ಲೇಕೆರೆ ಗ್ರಾಮದ ದಂಡಿನಶಿವರ ಹೋಬಳಿ ತುರುವೇಕೆರೆ ತಾಲ್ಲೂಕು ತುಮಕೂರು ಜಿಲ್ಲೆಯವರು. ಇವರು ನೀಡಿರುವ ಶಾಲಾ ಮಟ್ಟ, ತಾಲ್ಲೂಕು ಮಟ್ಟ, ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದ ಶೈಕ್ಷಣಿಕ ಸೇವೆಯನ್ನು ಗುರುತಿಸಿ ವಿಶ್ವ ಜ್ಞಾನಶ್ರೀ ಪುರಸ್ಕಾರ ನೀಡಿ ಗೌರವಿಸಲಾಯಿತು.
ಇದಕ್ಕಾಗಿ ಅವರಿಗೆ ಅವರ ಸಮಸ್ತ ಸ್ನೇಹ ಬಳಗ, ಶಿಕ್ಷಕ ಬಳಗ ಹಾಗೂ ವಿದ್ಯಾರ್ಥಿ ಬಳಗ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.