ಫೆ. 11 ರಂದು ಶ್ರೀ ಸತ್ಯಸಾಯಿ ಸೇವಾ ಸಮಿತಿ 17ನೇ ವಾರ್ಷಿಕೋತ್ಸವ

Must Read

ಮೂಡಲಗಿ: ಪಟ್ಟಣದ ಶ್ರೀ ಸತ್ಯಸಾಯಿ ಸೇವಾ ಸಮಿತಿ ಆಶ್ರಯದಲ್ಲಿ ಯುಗಾವತಾರಿ ಭಗವಾನ ಶ್ರೀ ಸತ್ಯ ಸಾಯಿಬಾಬಾರವರ ಪರಮಪಾವನ ಸಾನ್ನಿಧ್ಯದಲ್ಲಿ 17ನೇ ವಾರ್ಷಿಕೋತ್ಸವ ಸಮಾರಂಭವು ಫೆ.11 ರಂದು ಆರ್‍ಡಿಎಸ್ ಶಿಕ್ಷಣ ಸಂಸ್ಥೆಯ ಸಭಾ ಭವನದಲ್ಲಿ ಬೆಳಿಗ್ಗೆ 10-30 ಗಂಟೆಗೆ ಜರುಗಲಿದೆ ಎಂದು ಸೇವಾ ಸಮಿತಿ ತಿಳಿಸಿದೆ.

ಸಮಾರಂಭದ ಸಾನ್ನಿಧ್ಯವನ್ನು ಪಟ್ಟಣದ ಸಿದ್ದ ಸಂಸ್ಥಾನ ಮಠದ ಶ್ರೀ ದತ್ತಾತ್ರೇಯಬೋಧ ಸ್ವಾಮಿಗಳು, ಶ್ರೀ ಶ್ರೀಧರಬೋಧ ಸ್ವಾಮಿಗಳು, ಸುಣಧೋಳಿಯ ಜಡಿಸಿದ್ದೇಶ್ವರ ಮಠದ ಶ್ರೀ ಶಿವಾನಂದ ಸ್ವಾಮಿಗಳು ವಹಿಸುವರು.

ರಾಜ್ಯ ಸಂಪನ್ಮೂಲ ವ್ಯಕ್ತಿ ಬೆಳಗಾವಿ ವಿಭಾಗದ ಸುರೇಶ ಕಬ್ಬೂರ ಅಧ್ಯಕ್ಷತೆ ವಹಿಸುವರು. ಶ್ರೀ ಸತ್ಯಸಾಯಿ ಸೇವಾ ಸಮಿತಿ ಬೆಳಗಾವಿ ಜಿಲ್ಲಾಧ್ಯಕ್ಷ ವಸಂತ ಬಾಳಿಗಾ, ವಿಕ್ರಮ ಮುರಳಿ, ಲೋಹಿತ ಕಲಾಲ, ಸಂತೋಷ ಪಾರ್ಶಿ, ಅಜಿತ ಮನ್ನಿಕೇರಿ ಮುಖ್ಯ ಅತಿಥಿಗಳಾಗಿ ಆಗಮಿಸುವರು ಎಂದು ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group