ಕೆ.ಎಚ್ ಸೋನವಾಲಕರ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ

Must Read

ಮೂಡಲಗಿ: ಪಟ್ಟಣದ ಕೆ.ಎಚ್. ಸೋನವಾಲಕರ ಸರಕಾರಿ ಪ್ರೌಢ ಶಾಲೆಯ 2023-24ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 10ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಶನಿವಾರ ಫೆ.10 ರಂದು ಮಧ್ಯಾಹ್ನ 2 ಗಂಟೆಗೆ ಜರುಗಲಿದೆ.

ಸಮಾರಂಭದ ಸಾನ್ನಿಧ್ಯವನ್ನು ಶ್ರೀ ದತ್ತಾತ್ರಯಬೋಧ ಶ್ರೀಗಳು, ಶ್ರೀ ಶ್ರೀಧರಬೋಧ ಶ್ರೀಗಳು, ಸುಣಧೋಳಿಯ ಶ್ರೀ ಶಿವಾನಂದ ಶ್ರೀಗಳು, ಮುನ್ಯಾಳ-ರಂಗಾಪೂರದ ಡಾ.ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಶ್ರೀಗಳು ವಹಿಸುವರು. 

ಶಾಲಾ ಭೂದಾನಿ ಹಾಗೂ ಎಸ್.ಡಿಎಮ್.ಸಿ ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಸಂತೋಷ ಸೋನವಾಲಕರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಿ.ಇ.ಒ ಅಜೀತ ಮನ್ನಿಕೇರಿ, ಪುರಸಭೆ ಸದಸ್ಯ ಅಬ್ದುಲ್ ಗಫಾರ ಡಾಂಗೆ, ಬೆಲ್ಲದಬಾಗೇವಾಡಿಯ ನಿವೃತ್ತ ಶಿಕ್ಷಕ ಎಸ್.ಬಿ.ಮುನ್ನೋಳಿ ಉಪನ್ಯಾಸ ನೀಡುವರು ಹಾಗೂ ವಿಶೇಷ ಆಮಂತ್ರಿತರಾಗಿ ಪುರಸಭೆ ಸದಸ್ಯರು ಮತ್ತಿತರು ಭಾಗವಹಿಸುವರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group