ಜತ್ತ-ಜಾಂಬೋಟಿ ರಸ್ತೆ ಮೇಲ್ದರ್ಜೆಗೇರಿಸಲು ಮನವಿ ಸಲ್ಲಿಸಿದ ಈರಣ್ಣ ಕಡಾಡಿ

Must Read

ಬೆಳಗಾವಿ: ಜತ್ತ-ಜಾಬೋಂಟಿ ಹೆದ್ದಾರಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕು. ಬೆಳಗಾವಿ ವಿಮಾನ ನಿಲ್ದಾಣದಿಂದ ಸಿಟಿ ಬಸ್ ನಿಲ್ದಾಣದವೆರೆಗೆ ಮೇಲ್ಸೇತುವೆ ನಿರ್ಮಾಣ ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಬೇಕು ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಸಚಿವ ಬೆಳಗಾವಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿಯಲ್ಲಿ ಸಚಿವ ಗಡಕರಿಯವರನ್ನು ಭೇಟಿಯಾದ ಅವರು, ಯಳ್ಳೂರು ಗ್ರಾಮದಿಂದ ರಾಜಹಂಸಗಡವರೆಗೆ  ಅಟಲ್ ಬಿಹಾರಿ ವಾಜಪೇಯಿ ಕೇಬಲ್ ಕಾರ್ ಯೋಜನೆಯ ಕಾಮಗಾರಿಯನ್ನು ಶೀಘ್ರವಾಗಿ ಪ್ರಾರಂಭಿಸಬೇಕು ಹಾಗೂ ಸಂಕೇಶ್ವರದಿಂದ (ಎಸ್.ಎಚ್ 48) ದಿಂದ ನರಗುಂದವರೆಗೆ (ಎಸ್.ಎಚ್ 45) ವ್ಹಾಯಾ ಹುಕ್ಕೇರಿ, ಗೋಕಾಕ, ಯರಗಟ್ಟಿ ಮುನವಳ್ಳಿ ಮಾರ್ಗವಾಗಿ ರಾಜ್ಯ ಹೆದ್ದಾರಿಯನ್ನು ಮೇಲ್ದರ್ಜೆಗೆ ಏರಿಸಬೇಕೆಂದು ಒತ್ತಾಯಿಸಿದರು.

ಸಚಿವರು ಸಂಸದರ ಮನವಿಗೆ ಸಕಾರಾತ್ಮಕಾಗಿ ಸ್ಪಂದಿಸಿದ್ದು, ಪ್ರಸ್ತಾವನೆಗಳನ್ನು ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group