ಫೆ.29ರಂದು ವಿಶೇಷ ‘ಸ್ವಾತಿ’ ಪೂಜೆ

Must Read

ಮೈಸೂರು – ನಗರದ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಫೆ.29ರಂದು ಗುರುವಾರ ‘ಸ್ವಾತಿ’ ನಕ್ಷತ್ರದ ಪ್ರಯುಕ್ತ ವಿಶೇಷ ಪೂಜೆ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 8ಕ್ಕೆ ಸಂಕಲ್ಪ, 9ಕ್ಕೆ ಅಭಿಷೇಕ, 10.30ಕ್ಕೆ ಅಲಂಕಾರ, 11.30ಕ್ಕೆ ಮಹಾಮಂಗಳಾರತಿ, ಮಧ್ಯಾಹ್ನ 12.30ಕ್ಕೆ ಶಾತ್ತುಮೊರೈ, 1 ಗಂಟೆಗೆ ತೀರ್ಥ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿದೆ. ಸಂಜೆ 7.30ಕ್ಕೆ ಪ್ರಾಕಾರೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಪ್ರಧಾನ ವ್ಯವಸ್ಥಾಪಕ ಕೊಡುಗೈ ದಾನಿ ವಿದ್ವಾನ್ ಕೆ.ಆರ್.ಯೋಗಾನರಸಿಂಹನ್ (ಮುರುಳಿ ಅಯ್ಯಂಗಾರ್) ತಿಳಿಸಿದ್ದಾರೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಕೋರಿದ್ದಾರೆ. ಮಾಹಿತಿ ಮೊಬೈಲ್ 9342188323, 7598832271 ಸಂಪರ್ಕಿಸಬಹುದು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group