ಬೀದರ – ರಾಜ್ಯ ಸಭಾ ಚುನಾವಣೆಯಲ್ಲಿ ಆಯ್ಕೆಯಾದ ಕಾಂಗ್ರೆಸ್ ಅಭ್ಯರ್ಥಿ ನಾಸಿರ ಹುಸೇನ್ ಬೆಂಬಲಿಗರು ವಿಧಾನ ಸೌಧದಲ್ಲಿಯೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೀದರ ನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನೀತಿಗೆಟ್ಟ ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರ, ದೇಶದ್ರೋಹಿ ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರ ಎಂಬ ಘೋಷಣೆ ಗಳೊಂದಿಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗಿಳಿದರು. ಈ ಸಂದರ್ಭದಲ್ಲಿ ಪೊಲೀಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಭಾರಿ ಹೈಡ್ರಾಮಾ ನಡೆಯಿತು.
ಬೀದರ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆಗೆ ಯತ್ನ ಕೂಡ ನಡೆಯಿತು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಕಚೇರಿ ಸುತ್ತಲೂ ಬಿಗಿ ಪೋಲಿಸ್ ಬಂದೋ ಬಸ್ತ್ ಮಾಡಲಾಗಿತ್ತು.
ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶಶಿಕುಮಾರ್ ಪಾಟೀಲ ನೇತೃತ್ವದಲ್ಲಿ ಮುತ್ತಿಗೆ ಯತ್ನ ನಡೆದಿದ್ದು, ಬ್ಯಾರಿಕೇಡ್ ಹಾಕಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ತಡೆದರು ಆದರೂ ಬ್ಯಾರಿಕೇಡ ತೆಗೆಯಲು ಪ್ರಯತ್ನ ಮಾಡಿದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು ವಶಕ್ಕೆ ತೆಗೆದುಕೊಂಡರು.
ವರದಿ: ನಂದಕುಮಾರ ಕರಂಜೆ, ಬೀದರ