ಸವದತ್ತಿ – ವಿದ್ಯಾರ್ಥಿಗಳ ಭವಿಷ್ಯದ ಅತ್ಯಂತ ಮಹತ್ವದ ಘಟ್ಟ ಎಸ್.ಎಸ್.ಎಲ್.ಸಿ. ಇದು ಪರೀಕ್ಷೆಯ ಸಮಯ.ಈ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಾವುದೇ ಭಯ ಆತಂಕಕ್ಕೆ ಒಳಗಾಗದೇ ಆತ್ಮಸ್ಥೈರ್ಯದಿಂದ ಎದುರಿಸಿ. ತಾಲೂಕಿಗೆ ಪ್ರಥಮ ದ್ವಿತೀಯ ತೃತೀಯ ಬರುವ ವಿದ್ಯಾರ್ಥಿಗಳಿಗೆ ಬಹುಮಾನ ನೀಡುವುದಾಗಿ ಶಾಸಕ ವಿಶ್ವಾಸ ವೈದ್ಯ ತಿಳಿಸಿದರು.
ಅವರು ಸವದತ್ತಿಯ ಗುರುಭವನದಲ್ಲಿ ೨೦೨೩ ೨೪ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ವಿಷಯಗಳ ಸಂಪನ್ಮೂಲ ವ್ಯಕ್ತಿಗಳಿಂದ ಜರುಗಿದ ಒಂದು ದಿನದ ತರಬೇತಿ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ತಾಲೂಕಿನಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಪರೀಕ್ಷೆಗಾಗಿ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಗಳು ಬಾರದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆಯುವಲ್ಲಿ ನಮ್ಮ ಶಿಕ್ಷಣ ಇಲಾಖೆ ವತಿಯಿಂದ ಎಲ್ಲ ರೀತಿಯ ಸಹಾಯ ಸೌಲಭ್ಯಗಳನ್ನು ನೀಡಲಾಗುತ್ತಿದೆ ಮತ್ತು ಈ ಬಾರಿ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಟಾಪ್ ಟೆನ್ ಆದ ವಿದ್ಯಾರ್ಥಿಗೆ ಮತ್ತು ವಿದ್ಯಾರ್ಥಿನಿಯರಿಗೆ ವಿಶೇಷ ಬಹುಮಾನವನ್ನು ನೀಡಲಾಗುವುದು ಎಂದರು.
ಕಾರ್ಯಕ್ರಮದ ಪ್ರಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ದಂಡಿನ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮಕ್ಕಳು ಧೈರ್ಯದಿಂದ ಪತ್ರಿಕೆ ಬರೆಯುವಂತಹ ಮನೋಬಲವನ್ನು ನೀಡಲಾಗಿದೆ ಆ ನಿಟ್ಟಿನಲ್ಲಿ ನಮ್ಮ ತಾಲೂಕಿನ ಶಿಕ್ಷಕರು ಬಹಳಷ್ಟು ಶ್ರಮಪಟ್ಟು ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ ಕಳೆದ ಬಾರಿ ಪರೀಕ್ಷೆಯಲ್ಲಿ ೬೨೫ಕ್ಕೆ ೬೨೫ ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ ಈ ವರ್ಷವೂ ಕೂಡ ಫಲಿತಾಂಶ ನೂರಕ್ಕೆ ನೂರು ಬರುವಂತಾಗಲಿ ಎಂದರು.
ಅತಿಥಿಗಳಾಗಿ ಆಗಮಿಸಿದ ತಾಲೂಕು ವೈದ್ಯಾಧಿಕಾರಿ ಡಾ. ಶ್ರೀಪಾದ ಸಬನಿಸ ಮಾತನಾಡಿ, ಪರೀಕ್ಷೆಯ ಜೊತೆಗೆ ಆರೋಗ್ಯವೂ ಮುಖ್ಯ. ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವ ಜೊತೆಗೆ ಪರೀಕ್ಷೆಯ ಓದನ್ನು ಮುಂದುವರೆಸಿ. ಸದೃಢ ಮನಸ್ಸಿನಲ್ಲಿ ಸದೃಢ ಆರೋಗ್ಯ ಎಂಬುದರ ಮಹತ್ವವನ್ನು ತಿಳಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಮೈತ್ರಾ ದೇವಿ ವಸ್ತ್ರದ ಮಾತನಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತಾವು ಯಾವ ರೀತಿ ವಿದ್ಯಾಭ್ಯಾಸ ಮಾಡಬೇಕು ಎಂಬುದರ ಬಗ್ಗೆ ಉತ್ತಮ ಸಂಪನ್ಮೂಲ ವ್ಯಕ್ತಿಗಳು ತಿಳಿಸುವರು.ಈಗಾಗಲೇ ನಿಮ್ಮ ನಿಮ್ಮ ತರಗತಿ ಶಿಕ್ಷಕರು ಕೂಡ ಉತ್ತಮ ಬೋಧನೆ ನಿಮಗೆ ಮಾಡಿದ್ದು ಇವತ್ತು ನಡೆಯುವ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡು ಪರೀಕ್ಷೆ ಚನ್ನಾಗಿ ಪರೀಕ್ಷೆ ಬರೆಯಿರಿ. ಎಂದು ಕರೆ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾದ ಜೆ ಕೆ ಪಾಟೀಲ (ಗಣಿತ) ಸುಬ್ಬಾಪುರಮಠ (ಇಂಗ್ಲೀಷ) ಎಂ ವಿ ಉಪ್ಪಿನ (ಮಕ್ಕಳಲ್ಲಿ ಪ್ರೇರಣೆ ಹಾಗೂ ಪರೀಕ್ಷಾ ಭಯ ಹೋಗಲಾಡಿಸುವುದು) ಮಹೇಶ ಅಂಗಡಿ (ವಿಜ್ಞಾನ) ಗಣಿತ ಇಂಗ್ಲೀಷ ವಿಜ್ಞಾನ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯ ಮೇಲೆ ಶಿಕ್ಷಣ ಸಂಯೋಜಕ ಎಂ ಡಿ ಹುದ್ದಾರ, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಸುಧೀರ ವಾಘೇರಿ, ಪ್ರಶಾಂತ್ ಹಂಪಣ್ಣವರ, ಗಿರೀಶ ಮುನವಳ್ಳಿ, ಪಿ ಬಿ ಏಗನಗೌಡ ಸೇರಿದಂತೆ ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು., ಎಂ.ಡಿ.ಹುದ್ದಾರ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡೀನ ಸ್ವಾಗತಿಸಿದರು.ಸುಧೀರ ವಾಘೇರಿ ವಂದಿಸಿದರು.