ಬೀದರ: ಬೆಂಗಳೂರು, ಬೀದರ ಹಾಗೂ ಮಂಗಳೂರು ಈ ಮೂರು ಕ್ಷೇತ್ರದಿಂದ ಲೋಕಸಭೆಗೆ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂದು ಮುಸ್ಲಿಂ ಮುಖಂಡರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಅಯಜ್ ಖಾನ್ ಹೇಳಿಕೆಯೊಂದನ್ನು ನೀಡಿ, ಮುಸ್ಲಿಂ ಸಮುದಾಯಕ್ಕೆ ಬೆಂಗಳೂರು, ಬೀದರ ಹಾಗೂ ಮಂಗಳೂರು ಕ್ಷೇತ್ರದಿಂದ ಮೂರು ಟಿಕೆಟ್ ನೀಡಬೇಕು. ಹಲವು ವರ್ಷಗಳಿಂದ ಮುಸ್ಲಿಂ ಸಮುದಾಯದವರು ಕಾಂಗ್ರೆಸ್ ಪಕ್ಷಕ್ಕೆ ಬಹಳ ದುಡಿದಿದ್ದಾರೆ. ಬೀದರ ಲೋಕಸಭಾ ಕ್ಷೇತ್ರದಿಂದ ನನಗೆ ಟಿಕೆಟ್ ನೀಡಿ ..ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ದುಡಿದಿದ್ದೇನೆ. ಮುಸ್ಲಿಮ್ ಸಮುದಾಯಕ್ಕೆ ನಲವತ್ತು ವರ್ಷಗಳಿಂದ ಬೀದರ ಕ್ಷೇತ್ರದಿಂದ ಟಿಕೆಟ್ ನೀಡಿಲ್ಲ. ಬೀದರ ಜಿಲ್ಲೆಯಲ್ಲಿ ಐವತ್ತರ ಸರಾಸರಿ ಮುಸ್ಲಿಂ ಸಮುದಾಯದ ಜನರು ಇದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲಿಂ ಜನರು ಬಹಳ ಕೆಲಸ ಮಾಡಿದ್ದಾರೆ ಆದ್ದರಿಂದ ಈ ಸಲ ಮುಸ್ಲಿಮರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ವರದಿ: ನಂದಕುಮಾರ ಕರಂಜೆ, ಬೀದರ