ಸಿಂದಗಿ: ಭಾರತೀಯ ಜನತಾ ಪಾರ್ಟಿ, ವಿಜಯಪುರ ಜಿಲ್ಲೆಯ ಲೋಕಸಭಾ ಚುನಾವಣೆ 2024ರ ಪ್ರಚಾರಾರ್ಥವಾಗಿ ಯಂಕಂಚಿ ಮಹಾಶಕ್ತಿ ಕೇಂದ್ರದಲ್ಲಿ ಕಾರ್ಯಕರ್ತರ ಸಭೆ ಜರುಗಿತು.
ಈ ಸಂಧರ್ಭದಲ್ಲಿ ಉಪಸ್ಥಿತರಿದ್ದ ವಿಜಯಪುರ ಲೋಕಸಭಾ ಮೀಸಲು ಕ್ಷೇತ್ರದ ಅಭ್ಯರ್ಥಿ ರಮೇಶ ಜಿಗಜಿಣಗಿ ಮಾತನಾಡಿ, ಒಂದು ಲಕ್ಷ ಕೋಟಿ ಅನುದಾನ ವಿಜಾಪುರಕ್ಕೆ ಬಿಡುಗಡೆ ಮಾಡಿರುತ್ತೇವೆ ಮುಂದೆ ಕೂಡಾ ವಿಜಯಪುರ ಜಿಲ್ಲೆಗೆ ಅಭಿವೃದ್ಧಿ ಮಾಡಲು ಶ್ರಮಿಸುತ್ತೇನೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಮಾತನಾಡಿ, ವಿಶ್ವದಲ್ಲಿ ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ ಮೋದಿ ಅವರನ್ನು ಪ್ರಧಾನಿ ಮಾಡುವುದೇ ಬಿಜೆಪಿ ಗುರಿ ಹೊಂದಿದೆ ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.
ವಿಜಯಪುರ ಜಿಲ್ಲೆಯ ಚುನಾವಣೆಯ ಉಸ್ತುವಾರಿ ಅರುಣ ಶಹಾಪುರ ಮತ್ತು ಮಾಜಿ ಶಾಸಕ ರಮೇಶ ಬಾ ಭೂಸನೂರ, ಮಂಡಲ ಅಧ್ಯಕ್ಷ ಸಂತೋಷಗೌಡ ಪಾಟೀಲ, ಈರಣ್ಣ ರಾವೂರ, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಸಿದ್ದು ಬುಳ್ಳಾ ಲಿಂಬೆ ಅಭಿವೃದ್ಧಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ, ನಿಲ್ಲಮ್ಮ ಯಡ್ರಾಮಿ ಅನಸುಬಾಯಿ ಪಾರಗೋಂಡ ಹಾಗೂ ಪಕ್ಷದ ಹಿರಿಯ ಮುಖಂಡರು, ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಎಲ್ಲರೂ ಭಾಗವಹಿಸಿದ್ದರು.