- Advertisement -
ಸಿಂದಗಿ; ಸಾಲದ ಬಾಧೆಗೆ ಆತ್ಮಹತ್ಯೆ ಪರಿವಾರವಲ್ಲ. ಕಾಲದ ವೈಪರೀತ್ಯದಿಂದ ಮಳೆಯಾಗದೇ ಇಂತಹ ದುಸ್ತರ ಪರಿಸ್ಥಿತಿ ಬಂದೊದಗಿದ್ದು ರೈತರ ಕಷ್ಟಗಳಿಗೆ ಸರಕಾರ ಸ್ಪಂದಿಸುತ್ತದೆ ಅಲ್ಲದೆ ನಿಮ್ಮ ಕಷ್ಟಕ್ಕೆ ನಾನು ಕೂಡಾ ಕೈ ಜೋಡಿಸುವೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ತಾಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಗುರುಶಾಂತಯ್ಯ ಸಿದ್ದಯ್ಯ ನಾಗನಮಠ ರೈತ ಕುಟುಂಬಕ್ಕೆ ಬೇಟಿ ನೀಡಿ ಸಾಂತ್ವನ ಹೇಳುವ ಮೂಲಕ ದೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರಾದ ಪ್ರಭುಗೌಡ ಬಿರಾದಾರ, ಶಂಕರ ಮಾವೂರ, ಶಪೀಕ ಮುಜಾವರ, ಯಲ್ಲಾಲಿಂಗ ಅಗಸರ, ಶಂಕರಲಿಂಗ ಪತ್ತಾರ ಸೇರಿದಂತೆ ಅನೇಕರಿದ್ದರು.