ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ವತಿಯಿಂದ ಸ್ವಾಮೀಜಿಗಳಿಗೆ ಅಭಿನಂದನೆ

Must Read

ಮೈಸೂರು -ನಗರದ ಕಾಳಿದಾಸ ರಸ್ತೆಯಲ್ಲಿರುವ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ವತಿಯಿಂದ ಜೂ.8 ರಂದು ಸೋಸಲೆ ಶ್ರೀ ವ್ಯಾಸರಾಜ ಮಹಾಸಂಸ್ಥಾನ ಮತ್ತು ಶ್ರೀ ವ್ಯಾಸತೀರ್ಥ ವಿದ್ಯಾಪೀಠದ ಸಂಯುಕ್ತಾಶ್ರಯದಲ್ಲಿ ಶ್ರೀಮಾನ್ ನ್ಯಾಯ ಸುಧಾ ಮಂಗಳ ಮಹೋತ್ಸವದ ಪರೀಕ್ಷೆಗಳ ನಿಮಿತ್ತ ಶ್ರೀಗಳನ್ನು ಸತ್ಕರಿಸಲಾಯಿತು.

ಜೆ.ಪಿ.ನಗರದ ವಿಠಲಧಾಮದಲ್ಲಿ ಆಯೋಜನೆ ಮಾಡಿರುವ ಸಂದರ್ಭದಲ್ಲಿ ಸೋಸಲೆ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಹಾಗೂ ಮಂತ್ರಾಲಯದ ಪೀಠಾಧಿಪತಿಗಳಾದ ಶ್ರೀ ಸುಬುದೇಂಧ್ರ ತೀರ್ಥ ಶ್ರೀಪಾದಂಗಳವರನ್ನು ದೇವಸ್ಥಾನದ ಮುಖ್ಯಸ್ಥ ಕೆ.ಆರ್.ಯೋಗಾನರಸಿಂಹನ್ (ಮುರುಳಿ ಅಯ್ಯಂಗಾರ್) ಹಾಗೂ ಪಿ.ಆರ್.ಓ. ರಾಮಪ್ರಸಾದ್‍ರವರು ಫಲ ತಾಂಬೂಲ ನೀಡಿ ಸನ್ಮಾನಿಸಿ, ಅಭಿನಂದಿಸಿದರು.

ನಂತರ ಮಾತನಾಡಿದ ಕೆ.ಆರ್.ಯೋಗಾನರಸಿಂಹನ್‍ರವರು ಸೋಸಲೆ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಅವರು ಈ ಇಳಿ ವಯಸ್ಸಿನಲ್ಲೂ ನಿರಂತರ ಪಾಠ, ಪ್ರವಚನ ಮಾಡುತ್ತಿರುವುದು ಎಲ್ಲರಿಗೂ ಆದರ್ಶವಾಗಿದೆ ಎಂದು ತಿಳಿಸಿ, ವಿದ್ಯಾರ್ಥಿ ದಿಸೆಯಲ್ಲಿ ಯಾವ ರೀತಿ ಇರಬೇಕೆಂಬುದಕ್ಕೆ ಶ್ರೀ ಸೋಸಲೆ ಶ್ರೀಪಾದರು ಆದರ್ಶರಾಗಿದ್ದಾರೆ ಎಂದು ತಿಳಿಸಿದರು. ಅದೇ ರೀತಿ ಮಂತ್ರಾಲಯದ ಶ್ರೀ ಸುಬುದೇಂಧ್ರ ತೀರ್ಥ ಶ್ರೀಪಾದಂಗಳವರು ಜ್ಞಾನ ಪ್ರಸರಣ ಮತ್ತು ಶಾಸ್ತ್ರ ವಿದ್ಯೆ ಕಲಿಕೆಯ ನಿಟ್ಟಿನಲ್ಲಿ ಮಹತ್ತರವಾದ ಸಾಧನೆ ಮಾಡಿ, ಸಮಾಜಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡುವಲ್ಲಿ ಅಹರ್ನಿಶಿ ಶ್ರಮಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Latest News

ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ

ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ...

More Articles Like This

error: Content is protected !!
Join WhatsApp Group