ಮೈಸೂರು -ನಗರದ ಸರಸ್ವತಿಪುರಂನಲ್ಲಿರುವ ಜ್ಞಾನೋದಯ ಪದವಿ ಪೂರ್ವ ಕಾಲೇಜಿನಲ್ಲಿ ಜೂ.14 ರಂದು ಜಿಎಸ್‍ಎಸ್ ಗ್ರೂಪ್, ಲಯನ್ಸ್ ಮೈಸೂರು ಮತ್ತು ಜೀವಧಾರಾ ಬ್ಲಡ್ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಹೆಚ್ಚಿನ ಸಂಖ್ಯೆಯಲ್ಲಿ ಜ್ಞಾನೋದಯ ಪಿಯು ಕಾಲೇಜಿನ ಪೋಷಕರು ಹಾಗೂ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದರು.
ಸುಮಾರು 25 ಯೂನಿಟ್ ರಕ್ತವನ್ನು ಕಾಲೇಜು ಸಿಬ್ಬಂದಿ, ಪೋಷಕರು, ಹಳೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ದಾನ ಮಾಡಿದರು. ಮುಖ್ಯ ಅತಿಥಿಯಾಗಿ ಯೋಗಾತ್ಮ ಶ್ರೀಹರಿ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀಹರಿ ದ್ವಾರಕನಾಥ್ ಅವರು ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ರಕ್ತದಾನದ ಅವಶ್ಯಕತೆ ಮತ್ತು ಅಗತ್ಯತೆ ಬಗ್ಗೆ ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ವಿವಿಧ ಆಸ್ಪತ್ರೆಗಳ ಮತ್ತು ಆರೋಗ್ಯ ಚಿಕಿತ್ಸಾಲಯಗಳ ವೈದ್ಯಕೀಯ ಬಂಧುಗಳು, ಜ್ಞಾನೋದಯ ಪಿಯು ಕಾಲೇಜಿನ ಆಡಳಿತ ಮಂಡಳಿಯ ರಾಮಚಂದ್ರ, ಎಸ್.ಕೆ.ಭಾಸ್ಕರ್, ಪ್ರಾಂಶುಪಾಲರಾದ ಶ್ರೀಮತಿ ಪದ್ಮಾರವಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಪೋಷಕರು ಮತ್ತು ವಿದ್ಯಾರ್ಥಿಗಳು ಶಿಬಿರದಲ್ಲಿ ಉಪಸ್ಥಿತರಿದ್ದರು.