spot_img
spot_img

ರೈತರು ಆತ್ಮಹತ್ಯೆಯಂಥ ಕ್ರೂರ ಕೃತ್ಯಕ್ಕೆ ಬಲಿಯಾಗಬೇಡಿ – ಬಾಲಚಂದ್ರ ಜಾತಕಿಹೊಳಿ

Must Read

- Advertisement -

ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ವಿತರಣೆ

ಗೋಕಾಕ – ರೈತ ಬಾಂಧವರು ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗದೇ ಧೈರ್ಯದಿಂದ ಎದುರಿಸುವಂತೆ ಶಾಸಕ ಹಾಗೂ ಬೆಳಗಾವಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ನಗರದ ಎನ್‍ಎಸ್‍ಎಫ್ ಅತಿಥಿಗೃಹದಲ್ಲಿ ಕೃಷಿ ಇಲಾಖೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ ಸರ್ಕಾರದ ಸಹಾಯಧನದ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ರೈತರು ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಿ ನಿಮ್ಮೊಂದಿಗೆ ನಾವಿದ್ದೇವೆ. ಸಮಸ್ಯೆಗಳು ಎಲ್ಲರಿಗೂ ಸರ್ವೆ ಸಾಮಾನ್ಯ ಮನೆಯ ಯಜಮಾನ ಆತ್ಮಹತ್ಯೆ ಮಾಡಿಕೊಂಡರೇ ಇಡೀ ಕುಟುಂಬವು ಬೀದಿಗೆ ಬರುತ್ತದೆ. ಆತ್ಮಹತ್ಯೆಯಂತಹ ಕ್ರೂರ ಕೃತ್ಯಕ್ಕೆ ಬಲಿಯಾಗಬೇಡಿ. ಸರ್ಕಾರಗಳ ಎಲ್ಲ ಸೌಲಭ್ಯಗಳನ್ನು ಕ್ಷೇತ್ರದ ಎಲ್ಲ ರೈತರಿಗೆ ತಲುಪಿಸುವುದರೊಂದಿಗೆ ಅವರ ಸಮಸ್ಯೆಗಳಿಗೆ ಸದಾ ನಾವು ಸ್ಪಂದಿಸುತ್ತಿದ್ದೇವೆ ಎಂದು ತಿಳಿಸಿದರು.

- Advertisement -

ಇದೇ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡ ಅರಭಾವಿ ಕ್ಷೇತ್ರದ ನಲ್ಲಾನಟ್ಟಿ ಗ್ರಾಮದ ರಾಜೇಂದ್ರ ಕುಳ್ಳೂರ, ಕುಲಗೋಡ ಗ್ರಾಮದ ಸುಭಾಶ ದಾಸರೆಡ್ಡಿ, ದುರದುಂಡಿಯ ಸಿದ್ದಪ್ಪ ಅಂತರಗಟ್ಟಿ ಕುಟುಂಬಗಳಿಗೆ ತಲಾ 5ಲಕ್ಷದಂತೆ 15 ಲಕ್ಷ ರೂ.ಗಳ ಮಂಜೂರಾತಿ ಆದೇಶ ಪತ್ರವನ್ನು ಶಾಸಕರು ವಿತರಿಸಿದರು.

ಈ ಸಂದರ್ಭದಲ್ಲಿ ಟಿಎಪಿಎಮ್‍ಎಸ್ ಅಧ್ಯಕ್ಷ ಅಶೋಕ ನಾಯಿಕ ಮುಖಂಡರುಗಳಾದ ಮುತ್ತೆಪ್ಪ ಕುಳ್ಳೂರ, ಸಿದ್ರಾಮ ಕುಳ್ಳೂರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಮ್.ಎಮ್.ನದಾಫ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಆರೋಗ್ಯ ಸೇವೆಯಲ್ಲಿ ಪ್ರಾಮಾಣಿಕತೆ-ಕಳಕಳಿ ಬಹು ಮುಖ್ಯ – ಶ್ರೀ ಶಿವಾನಂದ ಗುರೂಜಿ

ರಮೇಶ್ ಪಿ.ಎಂ. ರವರಿಗೆ ಸನ್ಮಾನ ಬೆಳಗಾವಿ: ಪೂರ್ವಜನ್ಮದ ಪುಣ್ಯವಿದ್ದವರಿಗೆ ಮಾತ್ರ ಆರೋಗ್ಯ ಇಲಾಖೆಯಲ್ಲಿ ಸೇವೆ ಮಾಡುವ ಭಾಗ್ಯ ಲಭಿಸಿರುತ್ತದೆ. ಅನೇಕ ಜನ ಹಲವಾರು ರೋಗಗಳಿಂದ ಬಳಲುತ್ತಾ ಜೀವನದಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group