ಸಶಕ್ತ, ಆರೋಗ್ಯವಂತ ಸಮಾಜ ನಿರ್ಮಿಸುವಲ್ಲಿ ವೈದ್ಯರ ಪಾತ್ರ ದೊಡ್ಡದು

Must Read

ಬೀಳಗಿ: ವೃತ್ತಿಗಳಲ್ಲಿ ಪವಿತ್ರವಾದ ವೃತ್ತಿ ವೈದ್ಯ ವೃತ್ತಿ. ಸಶಕ್ತ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವಲ್ಲಿ ವೈದ್ಯರ ಪರಿಶ್ರಮ ದೊಡ್ಡದು. ಮನುಷ್ಯ ಸಾವು ಬದುಕಿನ ಮಧ್ಯ ಹೋರಾಡುವಂತ ಸಮಯದಲ್ಲಿ ವೈದ್ಯರನ್ನು ದೇವತಾ ರೂಪದಲ್ಲಿ ಕಾಣುತ್ತೇವೆ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ ವೈದ್ಯಕೀಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಚೇರಮನ್ ಎಸ್.ಆರ್.ಪಾಟೀಲ್ ಹೇಳಿದರು.

ತಾಲೂಕಿನ ಬಾಡಗಂಡಿ ಎಸ್.ಆರ್.ಪಾಟೀಲ ವೈದ್ಯಕೀಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಿದ ಡಾ.ಬಿಧನ ಚಂದ್ರರಾಯ ಗೌರವದ ದಿನವಾದ ರಾಷ್ಟ್ರೀಯ ವೈದ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವೈದ್ಯರ ಅಮೂಲ್ಯವಾದ ಸೇವೆ ಸದಾ ಕಾಲ ಇರಬೇಕು. ನಮ್ಮ ರಾಷ್ಟ್ರದ  ಅಭಿವೃದ್ಧಿ ಜನತೆಯ ಆರೋಗ್ಯದ ಮೇಲೆ ಅವಲಂಬಿಸಿದೆ ಎಂದರು.

ಎಸ್.ಆರ್.ಪಾಟೀಲ ವೈದ್ಯಕೀಯ ಕಾಲೇಜು ಕಾರ್ಯದರ್ಶಿ ಎಂ.ಎನ್.ಪಾಟೀಲ, ಮನುಷ್ಯನಿಗೆ ಆರೋಗ್ಯವೇ ಭಾಗ್ಯ ಎಂಬುದು ಸರ್ವಕಾಲಿಕ ಮಾತು. ಇದು ಅಷ್ಟೇ ಸತ್ಯವೂ ಕೂಡ. ಆರೋಗ್ಯವನ್ನು ರಕ್ಷಿಸುವುದು, ಅನಾರೋಗ್ಯಕ್ಕೆ ಮದ್ದು ನೀಡಿ, ಗುಣ ಪಡಿಸುವುದು ವೈದ್ಯರ ಕರ್ತವ್ಯವಾಗಿದೆ. ವೈದ್ಯೋ ನಾರಾಯಾಣ ಹರಿ ಎನ್ನುವುದು ಅದಕ್ಕೆ ಸಾಕ್ಷಿಯಾಗಿದೆ. ಅದಕ್ಕಾಗಿ ವೈದ್ಯರನ್ನ ದೇವರಿಗೆ ಹೊಲಿಸಲಾಗುತ್ತದೆ. ಈ ಪದ್ಧತಿಯೂ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಅನಾರೋಗ್ಯಕ್ಕೆ ತುತ್ತಾದ ಪ್ರತಿಯೊಬ್ಬ ರೋಗಿಯನ್ನು ಸರಿಯಾದ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಿ, ಅವನಿಗೆ ಪುನರ್ಜನ್ಮ ನೀಡುವುದು ಪ್ರತಿಯೊಬ್ಬ ವೈದ್ಯರ ಕಾಯಕವಾದರೆ. ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಇಂತಹ ಪುನರ್ಜನ್ಮ ನೀಡುವ ವೈದ್ಯರಿಗೆ ವಿಶೇಷ ಗೌರವ ನೀಡುವ ಸಲುವಾಗಿ ಪ್ರತಿ ವರ್ಷ ಜುಲೈ ೧ ರಂದು ರಾಷ್ಟ್ರೀಯ ವೈದ್ಯರ ದಿನವನ್ನ ಆಚರಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ದಯಾನಂದ ಪಾಟೀಲ, ವೈದ್ಯಕೀಯ ಕಾಲೇಜ್ ಡೀನ್ ಧರ್ಮರಾಯ ಇಂಗಳೆ, ವೈದ್ಯಕೀಯ ಅಧೀಕ್ಷಕ ಡಾ.ವಿಜಯಾನಂದ ಹಳ್ಳಿ, ವೈದ್ಯಕೀಯ ನಿರ್ದೇಶಕ ಡಾ.ರಾಘವೇಂದ್ರ ಪಾಟೀಲ ಮತ್ತಿತರರು ಇದ್ದರು.

Latest News

ಶಿಡ್ಲಘಟ್ಟ ಪ್ರಕರಣ : ಯಾರೇ ಇದ್ದರೂ ನಿರ್ದಾಕ್ಷಿಣ್ಯ ಕ್ರಮ – ಸಲೀಂ ಅಹ್ಮದ

ಬೀದರ - ಮಹಿಳೆಯರ ಮೇಲೆ ಯಾರೇ ಅನ್ಯಾಯ ಮಾಡಿದರೂ, ತಪ್ಪು ಮಾಡಿದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಶಿಡ್ಲಘಟ್ಟ ಪ್ರಕರಣದಲ್ಲಿ ಈಗಾಗಲೇ ಎಫ್ಆಯ್ಆರ್ ಆಗಿದೆ ಎಷ್ಟೇ ದೊಡ್ಡ...

More Articles Like This

error: Content is protected !!
Join WhatsApp Group