spot_img
spot_img

ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಸಮಾನತೆ ದೊರಕಬೇಕು- ಸಿಡಿಪಿಓ ಶ್ವೇತಾ

Must Read

- Advertisement -

ಮೈಸೂರು ನಗರ ವರ್ತಲ ರಸ್ತೆಯಲ್ಲಿರುವ ಮಾರ್ವೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶ್ವೇತಾ ರವರು ಹೆಣ್ಣು ಮಕ್ಕಳಿಗೆ ಸಮಾನತೆ ದೊರಕುವಂತೆ ಆಗಬೇಕು ಅಸಮಾನತೆ ನಿಲ್ಲಬೇಕು, ಹೆಣ್ಣು ಮಗುವಿಗೆ ಶಿಕ್ಷಣ ನೀಡಿದಾಗ ಇಡೀ ಕುಟುಂಬ ಮಾತ್ರವಲ್ಲ ಸಮಾಜವು ಉದ್ಧಾರವಾಗಲು ಸಾಧ್ಯವಾಗುತ್ತದೆ. ಹೆಣ್ಣು ಮಕ್ಕಳಿಗೆ ಇನ್ನು ಹೆಚ್ಚು ಅವಕಾಶಗಳು ಸಿಕ್ಕಲ್ಲಿ ಮಹಿಳೆಯರು ತಮ್ಮ ಪ್ರತಿಭೆಯನ್ನು ಹೊರಹಾಕಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಮಾನಸ ರವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದು ನಾವು ಹೆಣ್ಣು ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಢಿಸಿ ಮಹಿಳೆಯರು ಶಿಕ್ಷಣ, ಸಾಮಾಜಿಕ, ರಾಜಕೀಯ ಹಾಗೂ ಎಲ್ಲ ಕ್ಷೇತ್ರಗಳಲ್ಲೂ ಗಣನೀಯ ಸಾಧನೆ ಮಾಡಲು ಪ್ರೇರೇಪಿಸಬೇಕೆಂದು ತಿಳಿಸಿ, ಮೂಢನಂಬಿಕೆಗಳನ್ನು ಹೋಗಲಾಡಿಸಿ ವೈಚಾರಿಕತೆಯ ಹಿನ್ನೆಲೆಯಲ್ಲಿ ಪ್ರಜ್ಞಾವಂತರಾಗಿ ಮುನ್ನಡೆಯಬೇಕೆಂದು ತಿಳಿಸಿದರು.

- Advertisement -

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಾಮಾಜಿಕ ಕಾರ್ಯಕರ್ತೆಯರು ಭಾಗವಹಿಸಿ ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

- Advertisement -
- Advertisement -

Latest News

ಸಾವಿಲ್ಲದ ಶರಣರು -ಮಹಾ ದಾಸೋಹಿ ಎಲೆ ಮಲ್ಲಪ್ಪ ಶೆಟ್ಟರು

ಎಲೆ ಮಲ್ಲಪ್ಪ ಶೆಟ್ಟರ ಅವರ ಹಿರಿಯರು ಚಿಕ್ಕಮಗಳೂರಿನ ಹತ್ತಿರ ನಂದಿಹಳ್ಳಿ ಗ್ರಾಮದವರು. ರಾಜ ಮಹಾರಾಜರಿಗೆ ಸಮಾರಂಭ ಗಳಲ್ಲಿ ವೀಳ್ಯವನ್ನು ಸರಬರಾಜು ಮಾಡುವ ಕಾಯಕದವರು. ಶರಣ ಸಂಸ್ಕೃತಿಯ...
- Advertisement -

More Articles Like This

- Advertisement -
close
error: Content is protected !!
Join WhatsApp Group