ಮೂಡಲಗಿ: ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಬೆಳಗಾವಿ ಜಿಲ್ಲೆಗೆ 1306 ಕಿ.ಮೀ ಉದ್ದದ ರಸ್ತೆಯನ್ನು ಮಂಜೂರು ಮಾಡಲಾಗಿತ್ತು, ಅದರಲ್ಲಿ 1282 ಕಿ.ಮೀ ಉದ್ದದ ರಸ್ತೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಕೇಂದ್ರ ಗ್ರಾಮೀಣ ಅಭಿವೃದ್ಧಿ ಸಚಿವಾಲಯದ ರಾಜ್ಯ ಸಚಿವ ಕಮಲೇಶ್ ಪಾಸ್ವಾನ್ ಅವರು ಲಿಖಿತ ರೂಪದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ನಡೆಯುತ್ತಿರುವ ಮಳೆಗಾಲ ಅಧಿವೇಶದಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಅನುಷ್ಠಾನಗೊಳಿಸಲಾದ ಯೋಜನೆಗಳ ಕುರಿತು ಈರಣ್ಣ ಕಡಾಡಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿ ಒಟ್ಟು 24,208 ಕಿ.ಮೀ ಉದ್ದದ ರಸ್ತೆಯನ್ನು ಮಂಜೂರು ಮಾಡಲಾಗಿತ್ತು, ಅದರಲ್ಲಿ 23,863 ಕಿ.ಮೀ ಉದ್ದದ ರಸ್ತೆ ಕಾಮಗಾರಿ ಈಗಾಗಲೇ ಪೂರ್ಣಗೊಂಡಿವೆ ಮತ್ತು 163 ಬ್ರಿಡ್ಜಗಳ ಕಾಮಗಾರಿ ಮಂಜೂರು ಮಾಡಲಾಗಿತ್ತು, ಅದರಲ್ಲಿ 150 ಬ್ರಿಡ್ಜಗಳ ಕಾಮಗಾರಿಗಳು ಪೂರ್ಣಗೊಂಡಿವೆ.
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ಪರಿಣಾಮಕಾರಿತ್ವ ಮತ್ತು ವ್ಯಾಪ್ತಿಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಭೌಗೋಳಿಕ ಮಾಹಿತಿ ವ್ಯವಸ್ಥೆ ಮತ್ತು ಆನ್‌ಲೈನ್ ನಿರ್ವಹಣೆ, ಮಾನಿಟರಿಂಗ್ ಮತ್ತು ಲೆಕ್ಕಪತ್ರ ವ್ಯವಸ್ಥೆಯನ್ನು, ಯೋಜನೆ ಮೇಲ್ವಿಚಾರಣೆ ಮತ್ತು ಯೋಜನೆಯ ಪ್ರಗತಿಯ ನೈಜ ಸಮಯದ ಟ್ರ‍್ಯಾಕಿಂಗ್‌ಗಾಗಿ ಬಳಸಲಾಗುತ್ತದೆ. ರಸ್ತೆಯ ಬಾಳಿಕೆಯನ್ನು ಸುಧಾರಿಸಲು ಮತ್ತು ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡಲು ಹೊಸ ನಿರ್ಮಾಣ ತಂತ್ರಜ್ಞಾನಗಳು ಮತ್ತು ಸಾಮಗ್ರಿಗಳ ಅಳವಡಿಕೆ. ಫೀಲ್ಡ್ ಇಂಜಿನಿಯರ್‌ಗಳಿಂದ ಆನ್-ಸೈಟ್ ಡೇಟಾ ಸಂಗ್ರಹಣೆ ಮತ್ತು ಮೇಲ್ವಿಚಾರಣೆಗಾಗಿ ಮೊಬೈಲ್ ಅಪ್ಲಿಕೇಶನ್‌ಗಳ ಬಳಕೆ, ಸಂಪರ್ಕವಿಲ್ಲದ ವಸತಿಗಳಿಗೆ, ವಿಶೇಷವಾಗಿ ದೂರದ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಸಂಪರ್ಕಕ್ಕೆ ಆದ್ಯತೆ ನೀಡುವುದು ಹೀಗೆ ಹಲವಾರು ಕ್ರಮಗಳನ್ನು ಜಾರಿಗೆ ತಂದಿದೆ ಎಂದು ಸಚಿವರು ಉತ್ತರಿಸಿದ್ದಾರೆಂದು ತಿಳಿಸಿದ್ದಾರೆ