- Advertisement -
ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನ ಹಡಗಲಿ ಇವರು ಪ್ರತಿ ವರ್ಷದಂತೆ ಈ ವರ್ಷವೂ ಕನ್ನಡ ನುಡಿ ವೈಭವ ಆಚರಿಸುತ್ತಿದ್ದು ಆಗಷ್ಟ್ ೨೫ ರಂದು ದಾವಣಗೆರೆಯಲ್ಲಿ ನಡೆಯುವ ೪ ನೇ ಕನ್ನಡ ನುಡಿ ವೈಭವ ಕಾರ್ಯಕ್ರಮದ ಸರ್ವಾಧ್ಯಕ್ಷರಾಗಿ ಹಾಸನದ ಹಿರಿಯ ಸಾಹಿತಿ ಗೊರೂರು ಅನಂತರಾಜು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಬರಹಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಮಧುನಾಯ್ಕ ಲಂಬಾಣಿರವರು ತಿಳಿಸಿದ್ದಾರೆ.
ಸಾಹಿತ್ಯ ಕ್ಷೇತ್ರದಲ್ಲಿ ಕಳೆದ 38 ವರ್ಷಗಳ ಅವಧಿಯಲ್ಲಿ 60 ಸಾಹಿತ್ಯ ಕೃತಿಗಳನ್ನು ರಚಿಸಿ ಹಲವಾರು ಉಪಯುಕ್ತ ಲೇಖನಗಳನ್ನು ಬರೆಯುತ್ತಾ ಸದಾ ಕ್ರಿಯಾಶೀಲರಾಗಿರುವ ಹಾಸನದ ಗೊರೂರು ಅನಂತರಾಜುರವರು ಕನ್ನಡ ನುಡಿ ವೈಭವ ಕಾರ್ಯಕ್ರಮದ ಅಧ್ಯಕ್ಷರಾಗಿ ಒಪ್ಪಿಕೊಂಡಿರುವುದು ಸಂತಸ ತಂದಿದೆ ಎಂದು ಕನಾ೯ಟಕ ರಾಜ್ಯ ಬರಹಗಾರರ ಸಂಘದ ರಾಜ್ಯ ಅಧ್ಯಕ್ಷರು ಮಧು ನಾಯಕ ಲಂಬಾಣಿ ಮತ್ತು ಹಾಸನ ಜಿಲ್ಲಾ ಘಟಕದ ಅಧ್ಯಕ್ಷರು ಸುಂದರೇಶ್ ಡಿ. ಉಡುವೇರೆ ತಿಳಿಸಿದ್ದಾರೆ.