ಲಯನ್ಸ್ ಕ್ಲಬ್‌ದಿಂದ ಕಾಳಜಿ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಶಿಬಿರ

Must Read

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಪಟಗುಂದಿಯಲ್ಲಿರುವ ಪ್ರವಾಹ ಸಂತ್ರಸ್ತರ ಕಾಳಜಿ ಕೇಂದ್ರಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಿದ್ದರು.

೧೫೦ಕ್ಕೂ ಅಧಿಕ ಸಂಖ್ಯೆಯ ಸಂತ್ರಸ್ತರ ಆರೋಗ್ಯ ತಪಾಸಣೆಯನ್ನು ಮಾಡಿ ಅವರಿಗೆ ಉಚಿತ ಮಾತ್ರೆ, ಔಷಧಿಗಳನ್ನು ಮತ್ತು ಬಿಸ್ಕಟ್ ವಿತರಿಸಲಾಯಿತು.

ವೈದ್ಯರಾದ ಡಾ. ರಾಜೇಂದ್ರ ಗಿರಡ್ಡಿ, ಡಾ. ಎಸ್.ಎಸ್. ಪಾಟೀಲ, ಡಾ. ಮಹೇಶ ಮುಳವಾಡ, ಡಾ. ವಿಶಾಲ ಬಿ. ಪಾಟೀಲ, ಡಾ. ಮಲ್ಲಿಕಾರ್ಜುನ ಹಿರೇಮಠ, ಡಾ. ರವಿಚಂದ್ರನ ಕಂಕಣವಾಡಿ ಇವರು ಸಂತ್ರಸ್ತರ ಆರೋಗ್ಯ ತಪಾಸಣೆ ಮಾಡಿದರು.

ಲಯನ್ಸ್ ಕ್ಲಬ್ ಪರಿವಾರದ ಅಧ್ಯಕ್ಷ ಸಂಜಯ ಮೋಕಾಶಿ, ಖಜಾಂಚಿ ಕೃಷ್ಣಾ ಕೆಂಪಸತ್ತಿ, ಬಾಲಶೇಖರ ಬಂದಿ, ಶ್ರೀಶೈಲ,  ಲೋಕನ್ನವರ,  ಸುರೇಶ ನಾಯಿಕ, ಈರಣ್ಣ ಕೊಣ್ಣೂರ, ಗಿರೀಶ ಆಸಂಗಿ ಇದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group