spot_img
spot_img

ಆ. ೨೨ ರಂದು ಬಣಜಿಗ ಸಂಘದ ೧೬ನೇ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ

Must Read

- Advertisement -

ಮೂಡಲಗಿ: ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಮೂಡಲಗಿ ತಾಲೂಕಾ ಘಟಕದ ೧೬ನೇ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಗುರುವಾರ ಆಗಷ್ಟ ೨೨ ರಂದು ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪದಲ್ಲಿ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಮೂಡಲಗಿ ತಾಲೂಕಾ ಘಟಕದ ಅಧ್ಯಕ್ಷ ಶಿವಪ್ಪ ಭುಜನ್ನವರ ಹೇಳಿದರು.

ಅವರು ಪಟ್ಟದಲ್ಲಿ ಜರುಗಿದ ಪತ್ರಿಕಾಗೋಷ್ಟಿಯಲ್ಲಿ ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಮೂಡಲಗಿ ತಾಲೂಕಾ ಘಟಕದ ೧೬ನೇ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದ ಆಮಂತ್ರ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಸಂಘದ ತಾಲೂಕಾ ಘಟಕದ ಪ್ರಧಾನ ಕಾರ್ಯದರ್ಶಿ ಚಿದಾನಂದ ಶೆಟ್ಟರ ಮಾತನಾಡಿ, ಅ.೨೨ ರಂದು ಮುಂಜಾನೆ ೯ ಗಂಟೆಗೆ ಜರುಗುವ ಸಮಾರಂಭದ ಸಾನ್ನಿಧ್ಯವನ್ನು ಪಟ್ಟಣದ ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿಗಳಾದ ಶ್ರೀ ದತ್ತಾತ್ರೇಯಬೋಧ ಸ್ವಾಮೀಜಿ, ಶ್ರೀ ಶ್ರೀಧರಬೋಧ ಸ್ವಾಮೀಜಿ, ಸುಣಧೋಳಿ ಜಡಿಸಿಧೇಶ್ವರ ಮಠದ ಪೀಠಾಧಿಪತಿ ಶ್ರೀ ಶಿವಾನಂದ ಮಹಾಸ್ವಾಮೀಜಿ ವಹಿಸುವರು. ಸಮಾರಂಭವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ ಉದ್ಘಾಟಿಸುವರು, ಮುಖ್ಯ ಅಥಿತಿಗಳಾಗಿ ಬೆಳಗಾವಿ ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ, ಅಧ್ಯಕ್ಷತೆಯನ್ನು ಬಣಜಿಗ ಸಂಘದ ತಾಲೂಕಾ ಘಟಕದ ಅಧ್ಯಕ್ಷ ಶಿವಪ್ಪ ಭುಜನ್ನವರ ವಹಿಸುವರು, ಧಾರವಾಡ ಸಾಹಿತಿ ಡಾ.ಸಂಗಮನಾಥ ಲೋಕಾಪೂರ ಅವರು ಉಪನ್ಯಾಸ ನೀಡುವರು ಹಾಗೂ ತಾಲೂಕಾ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ವಾಣಿ ಉಪಸ್ಥಿತರಿರುವರು ಎಂದರು.

- Advertisement -

ಇದೇ ಸಮಾರಂಭದಲ್ಲಿ ಸಮಾಜ ೭೦ ವರ್ಷ ಪುರೈಸಿದ ಹಿರಿಯ ಜೀವಿಗಳನ್ನು ಸಮಾಜದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರಿಕ್ಷೇಯಲ್ಲಿ ಅಧಿಕ ಅಂಕಗಳಿಸಿದವರಿಗೆ ಹಾಗೂ ವಿಶೇಷ ಸಾಧನೆ ಗೈದವರನ್ನು ಸತ್ಕರಿಸಿ ಗೌರವಿಸಲ್ಲಾಗುವುದು ಎಂದು ಹೇಳಿದರು

ಪತ್ರಿಕಾಗೋಷ್ಠಿಯಲ್ಲಿ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ತಾಲೂಕಾ ಘಟಕದ ಉಪಾಧ್ಯಕ್ಷ ಪ್ರಕಾಶ ಪುಠಾಣಿ, ಖಜಾಂಚಿ ಶಿವಾನಂದ ಗಾಡವಿ, ನಿರ್ದೇಶಕರಾದ ವಿರುಪಾಕ್ಷ ಗಾಡವಿ, ಸಂತೋಷ ಅಂಗಡಿ, ವಿಶ್ವನಾಥ ಶೀಲವಂತ, ವೀರೇಶ ದುಗ್ಗಾಣಿ, ಸುಪ್ರೀತ ತಾಂವಶಿ, ಸಂಗಪ್ಪ ಅಂಗಡಿ, ಬಸವರಾಜ ಮಂಗಸೂಳಿ, ಬಾಲಶೇಖರ ಬಂದಿ, ಲಿಂಗಪ್ಪ ಗಾಡವಿ, ಶಿವಯೋಗೇಪ್ಪ ಸಬರದ, ಈರಣ್ಣ ಜಕಾತಿ ಮತ್ತಿತರರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಹಿರಿಯರು ಕುಟುಂಬದ ಬಲವಾದ ಅಡಿಪಾಯ — ಸಿದ್ದಲಿಂಗ ಕಿಣಗಿ

    ಸಿಂದಗಿ - ಅಜ್ಜಿಯರು ಕುಟುಂಬದ ದೊಡ್ಡ ಸಂಪತ್ತು, ಪ್ರೀತಿಯ ಪರಂಪರೆಯ ಸ್ಥಾಪಕರು, ಶ್ರೇಷ್ಠ ಕಥೆಗಾರರು ಮತ್ತು ಸಂಪ್ರದಾಯದ ಪಾಲಕರು. ಅಜ್ಜ-ಅಜ್ಜಿಯರು ಕುಟುಂಬದ ಬಲವಾದ...
- Advertisement -

More Articles Like This

- Advertisement -
close
error: Content is protected !!
Join WhatsApp Group