ಬೆಳಗಾವಿ – ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಬೆಳಗಾವಿ ಅವರ ಆದೇಶದಂತೆ ದಿನಾಂಕ 15-08-2024ರಂದು ಕಾರ್ಯನಿರ್ವಾಹಕ ಅಭಿಯಂತರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕೋಡಿ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆ ಹಮ್ಮಿಕೊಂಡರು ಈ ವಿಷಯ ಕುರಿತು ಕಟ್ಟು ನಿಟ್ಟಾಗಿ ಎಲ್ಲರೂ ಪಾಲಿಸಬೇಕೆಂದು ತಿಳಿಸಿದ್ದಾರೆ.
ನೀರಿನ ಗುಣಮಟ್ಟ ಪರೀಕ್ಷೆಯ, ಶುದ್ಧ ಕುಡಿಯುವ ನೀರಿನ ಘಟಕದ ಬಗ್ಗೆ ಕಾರ್ಯಾಚರಣೆ ಮತ್ತು ನಿರ್ವಹಣೆ , ಓಪನ್ ವೆಲ್ ನೀರು ಸರಬರಾಜು, ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಶುದ್ದಿಕರಣ ಘಟಕಗಳನ್ನು, ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಯ FTK KIT & H2S VIALS ಮುಖಾಂತರ ಪರಿಶೀಲಿಸಿ ಗ್ರಾಮೀಣ ಜನರಿಗೆ ಶುದ್ದವಾದ ನೀರನ್ನು ಒದಗಿಸಲು ಹೇಳಿದರು.
ಕಲುಷಿತ ನೀರು ಸೇವನೆಯಿಂದ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಸಂಭವಿಸುತ್ತಿರುವ ಅವಘಡಗಳನ್ನು ತಡೆಯುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಗ್ರಾಮ ಮಟ್ಟದಲ್ಲಿ ಕಾರ್ಯ ನಿರ್ವಹಿಸಬೇಕೆಂದು ತಿಳಿಸಿದ್ದಾರೆ.
ಬೆಳಗಿನ ಜಾವ ನೀರು ಸರಬರಾಜು ಸಮಯದಲ್ಲಿ ವಾಟರ್ ಮ್ಯಾನ್ ಹಾಗೂ ಸೆಕ್ಷನ್ ಆಫೀಸರ್ ಜಂಟಿಯಾಗಿ ಪರಿಶೀಲನೆ ಮಾಡಬೇಕೆಂದು ತಿಳಿಸಿರುತ್ತಾರೆ. ಗ್ರಾಮದಲ್ಲಿ IEC ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಎಲ್ಲಾ AEEs,AE,JE, SO,Support Engineers, Lab ಸಿಬ್ಬಂದಿಗಳು ಹಾಗೂ ಜಿಲ್ಲಾ ಯೋಜನಾ ವ್ಯವಸ್ಥಾಪಕರು ಉಪಸ್ಥಿತರಿದ್ದರು